ಜಿಲ್ಲೆ

ಟ್ರಾೃಕ್ಟರ್ ಡಿಕ್ಕಿಯಾಗಿ ರಸ್ತೆ ಬದಿ ನಿಂತಿದ್ದ ವ್ಯಕ್ತಿ ದುರ್ಮರಣ

Haveri - Kariyappa Aralikatti

ಶಿಗ್ಗಾಂವಿ: ಟ್ರಾೃಕ್ಟರ್ ಡಿಕ್ಕಿಯಾಗಿ ರಸ್ತೆ ಬದಿ ನಿಂತಿದ್ದ ವ್ಯಕ್ತಿ ಮೃತಪಟ್ಟ ಘಟನೆ ತಾಲೂಕಿನ ಹುಲಸೋಗಿ-ಮಣಕಟ್ಟಿ ರಸ್ತೆಯಲ್ಲಿ ಭಾನುವಾರ ನಡೆದಿದೆ.
ಶೇಖಪ್ಪ ಭರಮಪ್ಪ ಹರಿಜನ ಮೃತ ವ್ಯಕ್ತಿ.
ಇವರು ರಸ್ತೆ ಬದಿ ನಿಂತುಕೊಂಡಿದ್ದ ಸಮಯದಲ್ಲಿ ಟ್ರಾೃಕ್ಟರ್ ಬಂದು ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಶೇಖಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.