ಹುಮನಾಬಾದ್: ವಾಹನ ಸವಾರರು ರಸ್ತೆ ಸುರಕ್ಷತಾ ನಿಯಮಗಳ ಪಾಲನೆ ಜತಗೆ ನಾಲ್ಕು ಚಕ್ರ ವಾಹನ ಚಾಲಕರು ಬೆಲ್ಟ್ ಹಾಗೂ ದ್ವಿಚಕ್ರ ವಾಹನ ಚಾಲಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವಂತೆ ಸಂಚಾರ ಠಾಣೆ ಪಿಎಸ್ಐ ಬಸವಲಿಂಗಪ್ಪ ಕರೆ ನೀಡಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ಪೊಲೀಸ್ ಇಲಾಖೆ ವತಿಯಿಂದ ರಸ್ತೆ ಸುರಕ್ಷತಾ ಹಾಗೂ ಕಡ್ಡಾಯ ಹೆಲ್ಮೆಟ್ ಜಾಗೃತಿ ಅಭಿಯಾನ ಹಮ್ಮಿಕೊಂಡು ವಾಹನ ಚಾಲಕರಿಗೆ ಹಾಗೂ ಸಾರ್ಜನಿಕರಿಗೆ ರಸ್ತೆ ನಿಯಮ ಪಾಲನೆ ಕುರಿತು ಮಾಹಿತಿ ನೀಡಿದರು. ಸ್ಥಳೀಯ ಠಾಣೆಯ ಪಿಎಸ್ಐ ತಿಮ್ಮಯ್ಯಾ ಮಾತನಾಡಿ, ರಸ್ತೆ ಸುರಕ್ಷತಾ ನಿಯಮಗಳ ಉಲಂಘನೆಯಿಂದ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಹೆಚ್ಚಾಗಿ ಸಾವು ಸಂಭವಿಸುತ್ತಿವೆ. ಇದರಲ್ಲಿ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಸವಾರರ ಹೆಚ್ಚಾಗಿ ಅಪಘಾತದಲ್ಲಿ ಸಾಯುತ್ತಿರುವುದು ಕಂಡು ಬರುತ್ತಿದೆ. ಕಾರಣ ಸುರಕ್ಷಿತವಾಗಿ ಪ್ರಯಾಣ ಮಾಡಲು ಕಡ್ಡಾಯವಾಗಿ ಹೆಲ್ಮೇಟ್ ಧರಿಸಿ, ರಸ್ತೆ ನಿಯಮ ಪಾಲಿಸದ್ದಿದ್ದಲ್ಲಿ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ತಿಳಿಸಿದರು.
ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹೆಲ್ಮೆಟ್ ಧರಿಸದೆ ಸಂಚರಿಸುತ್ತಿರುವ ದ್ವಿಚಕ್ರ ವಾಹನಗಳಿಗೆ ಹಿಡಿದು, ದಂಢದ ರೂಪದಲ್ಲಿ ಹೊಸ ಹೆಲ್ಮೇಟ್ ನೀಡಿ, ಜಾಗೃತಿ ಮೂಡಿಸಿದರು. ಎಎಸ್ಐ ರಾಜಕುಮಾರ, ಸಿಬ್ಬಂದಿಗಳಾದ ಬಸವರಡ್ಡಿ, ರಾಘವೇಂದ್ರ, ಶ್ರೀ ಕಾಂತ, ಆಕಾಶ ಸೇರಿದಂತೆ ಇತರೆ ಸಿಬ್ಬಂದಿಗಳು ಇದ್ದರು.