ಜಿಲ್ಲೆ

ಅಪಾಯಕಾರಿ ಸೇತುವೆಗಳಲ್ಲಿ ಸಂಚಾರ ನಿಷೇಧ

ಇಂದಿರಾ ಎನ್ ಕೆ

ಮಂಗಳೂರು: ಬೆಳ್ತಂಗಡಿ ತಾಲೂಕಿನ ರಾಜ್ಯ ಹೆದ್ದಾರಿ-276 ರಸ್ತೆಯ ಕಲ್ಮಂಜ ಗ್ರಾಮದ ಸರಪಳಿ 65ಕಿ.ಮೀ, 66.10ಕಿ.ಮೀ, 67.70 ಕಿ.ಮೀ. ಸೇತುವೆಗಳಲ್ಲಿ ಸಂಚರಿಸುವುದು ಅಪಾಯಕಾರಿಯಾಗಿರುವುದರಿಂದ ಮುಂದಿನ ಆದೇಶದವರೆಗೆ ಈ ಸೇತುವೆಗಳಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ವಾಹನಗಳು ರಾಷ್ಟ್ರೀಯ ಹೆದ್ದಾರಿ-73ರ ಮೂಲಕ ಸಂಚರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶ ಹೊರಡಿಸಿದ್ದಾರೆ.