ಜಿಲ್ಲೆ

ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯಕ್ಕೆ ವಿಸ್ತರಣೆ

Mangaluru - Nishantha Narayana

ಪುತ್ತೂರು: ದಕ್ಷಿಣ ಕನ್ನಡದ ರೈಲು ಪ್ರಯಾಣಿಕ ಬಹುಕಾಲದ ಬೇಡಿಕೆಯಾದ ಮಂಗಳೂರು-ಕಬಕ ಪುತ್ತೂರು ಪ್ರಯಾಣಿಕರ ರೈಲು ಓಡಾಟವನ್ನು ಸುಬ್ರಹ್ಮಣ್ಯಕ್ಕೆ ವಿಸ್ತರಿಸುವ ಪ್ರಸ್ತಾವನೆಗೆ ಕೇಂದ್ರ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.

ಪುತ್ತೂರು ರೈಲ್ವೆ ಯಾತ್ರಿ ಸಂಘ ರೈಲು ವಿಸ್ತರಣೆಯ ಬೇಡಿಕೆಯನ್ನು ಮಾಡುತ್ತಲೇ ಬಂದಿತ್ತು. ಈ ಬಗ್ಗೆ ವಿಜಯವಾಣಿ ೨೦೨೩ರ ಸೆಪ್ಟೆಂಬರ್‌ನಲ್ಲಿ ವರದಿ ಮಾಡುವ ಮೂಲಕ ಜನರ ಬೇಡಿಕೆಯನ್ನು ರೈಲ್ವೆ ಇಲಾಖೆಗೆ ತಿಳಿಸುವ ಕಾರ್ಯ ಮಾಡಿತ್ತು. ರೈಲ್ವೆ ಸಚಿವರು, ಅಽಕಾರಿಗಳು, ರೈಲ್ವೆ ಮಂಡಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದಂತೆ, ಈ ವಿಸ್ತರಣೆಯಿಂದ ಮಂಗಳೂರು ನಗರದಿಂದ ಜಿಲ್ಲೆಯ ಗ್ರಾಮೀಣ ಪ್ರದೇಶದ ಸಂಪರ್ಕಕ್ಕೆ ಸಹಕಾರಿಯಾಗಲಿದೆ. ದೂರದ ಊರಿನಿಂದ ಮಂಗಳೂರಿಗೆ ಕೆಲಸಕ್ಕೆ ತೆರಳುವ ಜನರಿಗೂ ಅನುಕೂಲವಾಗಲಿದೆ. ಕುಕ್ಕೆ ಸುಬ್ರಹ್ಮಣ್ಯದ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ಸಹಾಯಕವಾಗಲಿದೆ. ಮಂಗಳೂರಿಗೆ ಬರುವ ವಿದ್ಯಾರ್ಥಿಗಳಿಗೆ, ಯಾತ್ರಾರ್ಥಿಗಳಿಗೆ, ಜಿಲ್ಲೆಯ ಜನರಿಗೆ ಅನುಕೂಲಕರವಾಗಲಿದೆ.