ಬೆಳ್ತಂಗಡಿ: ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಯಾವುದೇ ಕಷ್ಟ ಸುಖಗಳಿಗೆ ದ.ಕ ಸಹಕಾರಿ ಹಾಲು ಒಕ್ಕೂಟ ಸ್ಪಂದಿಸಲು ಬದ್ಧವಾಗಿದೆ ಎಂದು ಒಕ್ಕೂಟ ಉಪಾಧ್ಯಕ್ಷ ಉದಯ ಕೋಟ್ಯಾನ್ ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದ.ಕ.ಜಿಲ್ಲಾ ಸಹಕಾರಿ ಯೂನಿಯನ್, ದ.ಕ.ಸಹಕಾರಿ ಹಾಲು ಉತ್ಪಾದಕ ಒಕ್ಕೂಟ ಹಾಗು ದ.ಕ.ಸಹಕಾರ ಇಲಾಖೆ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ ಅಂಗವಾಗಿ ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಸಹಕಾರ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಉತ್ತಮ ಆಡಳಿತ ನಿರ್ವಹಣೆ ಕುರಿತು ವಿಶೇಷ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸಿದ್ದರು. ಉದಯ್ ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು. ಒಕ್ಕೂಟದ ಪುತ್ತೂರು ವಿಭಾಗ ಉಪವ್ಯವಸ್ಥಾಪಕ ಡಾ.ಸತೀಶ್ ರಾವ್, ಒಕ್ಕೂಟ ನಿವೃತ್ತ ಸಹಾಯಕ ವ್ಯವಸ್ಥಾಪಕ ಕೆ.ಸುಬ್ಬರಾವ್ ಮಾಹಿತಿ ನೀಡಿದರು.
ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ, ಒಕ್ಕೂಟ ನಿರ್ದೇಶಕ ಪ್ರಭಾಕರ ಆರಂಬೋಡಿ, ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ., ಯೂನಿಯನ್ ನಿರ್ದೇಶಕರಾದ ಸತೀಶ್ ಕೆ., ಪ್ರವೀಣ್ ಗಿಲ್ಬರ್ಟ್ ಪಿಂಟೋ, ಸದಸ್ಯೆ ಸವಿತಾ ಶೆಟ್ಟಿ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಸ್.ಎನ್.ರಘು. ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಶಾಖಾ ವ್ಯವಸ್ಥಾಪಕ ಸುಧೀರ್ ಉಪಸ್ಥಿತರಿದ್ದರು. ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ವಿ.ಹಿರೇಮಠ ಕಾರ್ಯಕ್ರಮ ನಿರೂಪಿಸಿದರು.
ದ.ಕ.ಜಿಲ್ಲೆಯಲ್ಲಿ ಪ್ರತಿದಿನ 4 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಗುಣಮಟ್ಟದ ಹಾಲು ಉತ್ಪಾದನೆಯಲ್ಲಿ ಸಾಧನೆ ಮೆರೆದಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಅತಿ ಹೆಚ್ಚಿನ ಹಾಲು ಉತ್ಪಾದನೆಯಾಗುತ್ತಿದೆ. ಒಕ್ಕೂಟ ಹಾಗೂ ಸಂಘಗಳು ಹೆಸರುವಾಸಿಯಾಗಲು ಕಾರ್ಯನಿರ್ವಹಣಾಧಿಗಳ ಉತ್ತಮ ಕಾರ್ಯವೈಖರಿಯೇ ಕಾರಣ. ಉದಯ ಕೋಟ್ಯಾನ್ ದ.ಕ ಸಹಕಾರಿ ಹಾಲು ಒಕ್ಕೂಟ ಉಪಾಧ್ಯಕ್ಷ