ಜಿಲ್ಲೆ

ಸ್ಕೌಟ್ಸ್, ಗೈಡ್ಸ್‌ನಿಂದ ವಿದ್ಯಾರ್ಥಿಗಳಲ್ಲಿ ಶಿಸ್ತು: ಡಯಟ್ ಪ್ರಾಂಶುಪಾಲ ಎಂ.ಶಿವಮಾದಪ್ಪ ಅಭಿಮತ

reportermys
ಮಂಡ್ಯ: ಸ್ಕೌಟ್ಕ್ ಮತ್ತು ಗೈಡ್ಸ್‌ನಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಶಿಸ್ತು, ಸಂಯಮ ಅಳವಡಿಸಿಕೊಳ್ಳಬಹುದು ಎಂದು ಡಯಟ್ ಪ್ರಾಂಶುಪಾಲ ಎಂ.ಶಿವಮಾದಪ್ಪ ಹೇಳಿದರು.
ನಗರದ ಡಯಟ್ ಸಭಾಂಗಣದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಕ್ಲಬ್ ಮಾಸ್ಟರ್, ಫ್ಲಾಕ್‌ಲೀಡರ್, ಸ್ಕೌಟ್ ಮಾಸ್ಟರ್, ಗೈಡ್ ಕ್ಯಾಪ್ಟನ್‌ಗಳ ಮೂಲ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರು ಮಕ್ಕಳಿಗೆ ಪಾಠದ ಜತೆಗೆ ಎನ್‌ಸಿಸಿ, ಎನ್‌ಎಸ್‌ಎಸ್, ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿಯೂ ತೊಡಗಿಸಿಕೊಳ್ಳುವಂತೆ ಮಾಡಬೇಕು. ಇವು ದೇಶಪ್ರೇಮ, ಶಿಸ್ತು ಹಾಗೂ ಸಂಯಮ ಕಲಿಸುತ್ತದೆ ಎಂದರು.
ವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಅವರ ನಡತೆಯೇ ಸಂಪೂರ್ಣವಾಗಿ ಬದಲಾಗುತ್ತದೆ. ಇಂತಹ ಶಿಬಿರ ಹಾಗೂ ಘಟಕಗಳು ಸಹ ಪಠ್ಯದ ಒಂದು ಭಾಗವೇ ಆಗಿದೆ. ಅದನ್ನ ಗಮನದಲ್ಲಿಟ್ಟುಕೊಳ್ಳಬೇಕು. ಮಕ್ಕಳಿಗೆ ಚಿಕ್ಕಂದಿನಿಂದಲೇ ಉತ್ತಮ ಹವ್ಯಾಸ ಬೆಳೆಸಿಕೊಳ್ಳಲು ಇಂತಹ ಶಿಬಿರಗಳು ಹಾಗೂ ಭಾಗವಹಿಸುವುದು ಮುಖ್ಯ ಎಂದರು.
ಸ್ಕೌಟ್ಸ್ ಮತ್ತು ಗೈಡ್ಸ್‌ನ ಮುಖ್ಯ ಆಯುಕ್ತ ಟಿ.ವರಪ್ರಸಾದ್ ಮಾತನಾಡಿದರು. ಜಿಲ್ಲಾ ಆಯುಕ್ತ ಭಕ್ತವತ್ಸಲ, ಉಪಾಧ್ಯಕ್ಷ ಥಾಮಸ್, ನಾಗರೇವಕ್ಕ, ಭವಾನಿ, ಕೃಷ್ಣಮೂರ್ತಿ, ಶಿವರಾಮೇಗೌಡ, ಪಿರಪ್ಪ ಹೂಗೊಂಡ, ಪದ್ಮಾ, ರಾಮಕೃಷ್ಣ, ಮಂಜುಳಾ ಇತರರಿದ್ದರು.