ಜಿಲ್ಲೆ

ಬ್ಯಾಂಕಿಂಗ್ ಹುದ್ದೆಗಳಿಗೆ ಕೃಷಿಕ್ ಸರ್ವೋದಯ ಫೌಂಡೇಷನ್‌ನಿಂದ ತರಬೇತಿ

ಆರ್.ಕೃಷ್ಣ

ಮೈಸೂರು: ರಾಷ್ಟ್ರೀಕೃತ ಬ್ಯಾಂಕ್‌ಗಳ ಹಾಗೂ ಗ್ರಾಮೀಣ ಬ್ಯಾಂಕ್‌ಗಳ ಪ್ರೊಬೇಷನರಿ ಅಧಿಕಾರಿ ಹಾಗೂ ಕ್ಲರಿಕಲ್ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಗೆ ಕೃಷಿಕ್ ಸರ್ವೋದಯ ಫೌಂಡೇಷನ್‌ನಿಂದ ಮೇ 21ರಿಂದ ತರಬೇತಿ ಆಯೋಜಿಸಲಾಗಿದೆ.

ಯೂನಿಯನ್ ಬ್ಯಾಂಕ್‌ನ ವಿಶೇಷ ಅಧಿಕಾರಿಗಳ ಖಾಲಿ ಇರುವ 500, ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ 500 ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ಲದೆ ಆರ್‌ಆರ್‌ಬಿ, ಎಎಲ್‌ಪಿಯಲ್ಲಿ 9,900 ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದೆ. ಪದವೀಧರರು, ಐಟಿಐ, ಡಿಪ್ಲೊಮಾ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಐಬಿಪಿಎಸ್‌ನಿಂದ ಸಹಾಯಕ ಹುದ್ದೆಗೆ ಜುಲೈನಲ್ಲಿ ಹಾಗೂ ಪ್ರೊಬೇಷನರಿ ಅಧಿಕಾರಿಗಳ ಹುದ್ದೆಗೆ ಆಗಸ್ಟ್‌ನಲ್ಲಿ ಅಧಿಸೂಚನೆ ಹೊರಡಿಸಲಾಗುವುದು. ಈ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿಗೆ ವಿಜಯನಗರ 2ನೇ ಹಂತದಲ್ಲಿರುವ ಜನರಲ್ ಕೆ.ಎಸ್.ತಿಮ್ಮಯ್ಯ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫೌಂಡೇಷನ್‌ನ ಕೃಷಿಕ್ ಭವನದಲ್ಲಿ ತರಬೇತಿ ನೀಡಲಾಗುವುದು.

ನಿವೃತ್ತ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಸೇರಿದಂತೆ ಪರಿಣತ ಸಂಪನ್ಮೂಲ ವ್ಯಕ್ತಿಗಳು ಮಾಗದರ್ಶನ ನೀಡಲಿದ್ದಾರೆ. ಆನ್‌ಲೈನ್, ಆಫ್‌ಲೈನ್‌ನಲ್ಲಿ ತರಗತಿ ನಡೆಸಲಾಗುವುದು. ಆಸಕ್ತರು ಮಾಹಿತಿ 8296031570 ಈ ಮೊಬೈಲ್ ಸಂಖ್ಯೆಗೆ ಕರೆ ಅಥವಾ ವಾಟ್ಸ್‌ಆ್ಯಪ್ ಮಾಡಿ ಮೇ 20ರ ಒಳಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಪುರುಷ, ಮಹಿಳೆಯರಿಗೆ ಪ್ರತ್ಯೇಕ ವಸತಿ ಸೌಲಭ್ಯ ಇರಲಿದೆ ಎಂದು ಫೌಂಡೇಷನ್ ಜಂಟಿ ಕಾರ್ಯದರ್ಶಿ ವೈ.ಟಿ.ಕೆಂಚೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.