ಮಂಡ್ಯ: ಕೌಶಲಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಉದ್ಯಮಶೀಲತಾ ಅಭಿವೃದ್ದಿ ಕೇಂದ್ರ (ಸಿಡಾಕ್), ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವವರಿಗೆ ಒಂದು ದಿನದ ಉದ್ಯಮಶೀಲತಾ ತಿಳಿವಳಿಕೆ ಶಿಬಿರವನ್ನು ಅಕ್ಟೋಬರ್‌ನಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.
ಸ್ವಂತ ಉದ್ಯಮ ಸ್ಥಾಪಿಸಲು ಬಯಸುವ ಆಸಕ್ತರಿಗೆ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು/ಪ್ರೋತ್ಸಾಹ, ಮುಂದೆ ಕೈಗೊಳ್ಳಲಾಗುವ ತರಬೇತಿ ಹಾಗೂ ಇತರೆ ಕೈಗಾರಿಕಾ ವಿಷಯಗಳ ಕುರಿತು ಮಾಹಿತಿ ನೀಡಲಾಗುವುದು ಕನಿಷ್ಟ 18 ವರ್ಷ ಮೇಲ್ಪಟ್ಟ ಓದಲು ಹಾಗೂ ಬರೆಯುವವರು ಸೆ.29ರೊಳಗೆ ಜಿಲ್ಲಾ ಕೈಗಾರಿಕಾ ಕೇಂದ್ರಕ್ಕೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಮೊ.ಸಂ 9008194396 ಅಥವಾ 7760145784 ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.