Training icon isolated on white background. Vector illustration. Eps 10. 
ಜಿಲ್ಲೆ

ಯುಜಿಸಿ, ನೆಟ್, ಕೆ-ಸೆಟ್ ಪರೀಕ್ಷೆಗಳಿಗೆ ತರಬೇತಿ

ಡಿ.ಪಿ.ನಾಗರಾಜ ಶ್ರೇಷ್ಠಿ

ಚಿತ್ರದುರ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಸುವ ರಾಜ್ಯಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ(ಕೆ-ಸೆಟ್) ಹಾಗೂ ಹೊಸದಿಲ್ಲಿಯ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ ನಡೆಸುವ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ(ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನಾ ಸಹಾಯಕರ(ಜೆಆರ್‌ಎಫ್)ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರದಲ್ಲಿ ನೀಡಲು ನಿರ್ಧರಿಸಲಾಗಿದೆ. ಆಸಕ್ತರು ಜೂ.30 ರೊಳಗೆ ಹೆಸರು ನೋಂದಾಯಿಸಿಕೊಳ್ಳ ಬಹುದೆಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕುಲಸಚಿವ ಪ್ರೊ.ಎಸ್.ಕೆ. ನವೀನ್ ತಿಳಿಸಿದ್ದಾರೆ.