ಜಿಲ್ಲೆ

ಕಸೂತಿ ಕಲೆ ತರಬೇತಿ

Dharwada - Basavaraj Idli

ಹುಬ್ಬಳ್ಳಿ: ಇಲ್ಲಿಯ ಇನ್ನರ್ ವ್ಹೀಲ್ ಕ್ಲಬ್ ವತಿಯಿಂದ ಉಚಿತ ಕಸೂತಿ ಕಲೆ ತರಬೇತಿ ಕಾರ್ಯಾಗಾರವನ್ನು ನಗರದ ಗೋಕುಲ ರಸ್ತೆ ಉತ್ತರ ಕರ್ನಾಟಕ ಸಣ್ಣ ಕೈಗಾರಿಕಾ ಸಂಘದಲ್ಲಿ ಸೆ. 20ರಿಂದ 15 ದಿನಗಳವರೆಗೆ ಏರ್ಪಡಿಸಲಾಗಿದೆ.

ಧಾರವಾಡದ ಆರತಿ ಕ್ರಾಫ್ಟ್ ಸಂಸ್ಥೆಯ ವತಿಯಿಂದ ತರಬೇತಿ ನೀಡಲಾಗುವುದು. ಆಸಕ್ತ ಮಹಿಳೆಯರು ಇದರ ಪ್ರಯೋಜನ ಪಡೆಯಬೇಕೆಂದು ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಪ್ರಿಯದರ್ಶಿನಿ ಕೊಟ್ಟೂರಶೆಟ್ಟರ್ ಕೋರಿದ್ದಾರೆ.