ಜಿಲ್ಲೆ

ಮಾರುಕಟ್ಟೆ ಸೃಷ್ಟಿಸಿದರೆ ಕೃಷಿಕರಿಗೆ ಯಶಸ್ಸು : ಶಾಸಕ ರಾಜೇಶ್ ನೈಾಕ್ ಉಳಿಪ್ಪಾಡಿಗುತ್ತು ಅನಿಸಿಕೆ

ಸೌಮ್ಯ ಆರ್

ಬಂಟ್ವಾಳ: ಕೃಷಿಯತ್ತ ಯುವ ಸಮುದಾಯ ಒಲವು ಹೊಂದಿದ್ದು, ಆಧುನಿಕತೆಯ ಸ್ಪರ್ಶ ನೀಡಿ, ಉತ್ತಮ ಇಳುವರಿ ಪಡೆದ ಬಳಿಕ ಮಾರುಕಟ್ಟೆ ಸೃಷ್ಟಿಸಿದರೆ ಯಶಸ್ಸು ಗಳಿಸಲು ಸಾಧ್ಯ ಎಂದು ಶಾಸಕ ರಾಜೇಶ್ ನೈಾಕ್ ಉಳಿಪ್ಪಾಡಿಗುತ್ತು ಹೇಳಿದರು.

ಕಡೇಶಿವಾಲಯ ಗ್ರಾಮದ ಸಂಜೀವಿನಿ ಒಕ್ಕೂಟ ಸದಸ್ಯರಿಗೆ ಒಡ್ಡೂರು ಫಾರ್ಮ್ ಹೌಸ್‌ನ ಸಭಾಂಗಣದಲ್ಲಿ ರೈತ ಉತ್ಪಾದಕ ಸಂಸ್ಥೆ ನಿರ್ಮಾಣ ಬಗ್ಗೆ ಮಾಹಿತಿ ಹಾಗೂ ಕೃಷಿ ಚಟುವಟಿಕೆಗಳ ವಿಶೇಷ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಕೃಷಿ ಇಲಾಖೆ ನಿರ್ದೇಶಕ ಕೃಷಿ ನಿರ್ದೇಶಕಿ ಡಾ.ವೀಣಾ ರೈ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಮಾಹಿತಿ ನೀಡಿದರು. ಕಡೇಶಿವಾಲಯ ಗ್ರಾಪಂ. ಅಧ್ಯಕ್ಷೆ ಭಾರತಿ ಎಸ್.ರಾವ್, ರೈತ ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷ ವಿದ್ಯಾಧರ ರೈ, ಮಾತೃ ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಬಬಿತಾ, ಗ್ರಾಪಂ ಸದಸ್ಯರಾದ ಸನತ್ ಆಳ್ವ, ಸುರೇಶ್ ಬನಾರಿ, ಜಯ ಆರ್. ಮತ್ತು ದೇವಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ಕಡೇಶಿವಾಲಯ ಪಿಡಿಒ ಸುನೀಲ್ ಕುಮಾರ್ ನಿರೂಪಿಸಿದರು.

ರೈತ ಉತ್ಪಾದಿಸಿದ ಎಲ್ಲಾ ವಸ್ತುಗಳಿಗೂ ಉತ್ತಮವಾದ ಮಾರುಕಟ್ಟೆ ವ್ಯವಸ್ಥೆ ಇದ್ದು, ಇದರ ಸದುಪಯೋಗ ಪಡೆದುಕೊಳ್ಳುವಲ್ಲಿ ರೈತರು ಎಡವಿರುವುದೇ ಒಂದಷ್ಟು ಕೃಷಿ ಕ್ಷೇತ್ರಕ್ಕೆ ಹಿನ್ನಡೆಯಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾ ಅಥವಾ ಇತರ ಸಾಮಾಜಿಕ ಮಾಧ್ಯಮ ಕೃಷಿ ವಿಚಾರದಲ್ಲಿ ಆಸಕ್ತಿಯನ್ನು ಮೂಡಿಸುವ ನಿಟ್ಟಿನಲ್ಲಿ ಅನೇಕ ಮಾಹಿತಿಗಳನ್ನು ಪಡೆಯಲು ಸಾಧ್ಯವಾಗಿದೆ. ರಾಜೇಶ್ ನೈಾಕ್ ಶಾಸಕ