ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಎಎಸ್ ಅಧಿಕಾರಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಕರ್ನಾಟಕ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾಗಿದ್ದ ಡಾ. ಚನ್ನಪ್ಪ ಎ. ಅವರನ್ನು ರಾಯಚೂರು ವಿಶ್ವವಿದ್ಯಾಲಯದ ಆಡಳಿತ ಕುಲಸಚಿವ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಹು-ಧಾ ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಡಾ. ರುದ್ರೇಶ ಘಾಳಿ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಪರ ಆಯುಕ್ತ ಹುದ್ದೆಗೆ ವರ್ಗ ಮಾಡಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಪರ ಆಯುಕ್ತರಾಗಿದ್ದ ಜಯಶ್ರೀ ಶಿಂತ್ರಿ ಅವರನ್ನು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಸಚಿವ ಖಾಲಿ ಹುದ್ದೆಗೆ ವರ್ಗಾಯಿಸಲಾಗಿದೆ. ಚಿಕ್ಕಮಗಳೂರು ಉಪ ವಿಭಾಗಾಽಕಾರಿ ದೇವರಾಜ್ ಆರ್. ಅವರನ್ನು ಧಾರವಾಡ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿ ಖಾಲಿ ಹುದ್ದೆಗೆ ನಿಯುಕ್ತಿಗೊಳಿಸಲಾಗಿದೆ.