ಮಂಗಳೂರು: ಸುರತ್ಕಲ್ ಮುಕ್ಕ ಎನ್ಐಟಿಕೆ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ ಮಾಡುತ್ತಿದ್ದ ಆಸೀಫ್ ಆಪತ್ಬಾಂಧವ ಮೇಲೆ ಮಂಗಳವಾರ ರಾತ್ರಿ ಮಂಗಳಮುಖಿಯರು ದಾಳಿ ಮಾಡಿದ್ದಾರೆ. ರಾತ್ರಿ 12:30ರ ಸುಮಾರಿಗೆ ಈ ದಾಳಿ ನಡೆದಿದ್ದು, ಪ್ರತಿಭಟನಾ ಸ್ಥಳಕ್ಕೆ ಬಂದು ಅಸಭ್ಯವಾಗಿ ವರ್ತಿಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಹೆಚ್ಚಿನ ಅನಾಹುತ ಆಗದಂತೆ ತಡೆದಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಆಸೀಫ್, ಮಂಗಳಮುಖಿಯರನ್ನು ಕಳುಹಿಸಿ ಹೋರಾಟದ ಚಿತ್ರಣ ಬದಲಿಸಲು ಯತ್ನಿಸಲಾಗಿದೆ ಎಂದು ಆರೋಪಿಸಿದ್ದಾರೆ. ಘಟನೆಗೆ ಕುರಿತಂತೆ ಸ್ಥಳೀಯ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಧ್ಯಮ ಗಳಿಗೆ ತಿಳಿಸಿದ್ದಾರೆ.