ಸೋಮವಾರಪೇಟೆ ತಾಲೂಕಿನ ಕೂಗೇಕೋಡಿ ಜಂಕ್ಷನ್‌ನ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿರುವುದು.  
ಜಿಲ್ಲೆ

ವಿದ್ಯುತ್ ಕಂಬಕ್ಕೆ ಸಾರಿಗೆ ಬಸ್ ಡಿಕ್ಕಿ

ಸೋಮವಾರಪೇಟೆ : ಕೂಗೇಕೋಡಿ ಜಂಕ್ಷನ್‌ನಲ್ಲಿ ಶನಿವಾರ ಬೆಳಗ್ಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ.

ಬೆಂಗಳೂರಿನಿಂದ ಸೋಮವಾರಪೇಟೆಗೆ ಆಗಮಿಸುತ್ತಿದ್ದ ಬಸ್ ಬೆಳಗಿನ ಜಾವ 4 ಗಂಟೆಗೆ ಬೆಂಗಳೂರು-ಮಡಿಕೇರಿ ರಾಜ್ಯಹೆದ್ದಾರಿಯ ಕೂಗೇಕೋಡಿ ಜಂಕ್ಷನ್ ತಿರುವಿನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಮೂರು ವಿದ್ಯುತ್ ಕಂಬಗಳು ತುಂಡಾಗಿದೆ. ಅದೃಷ್ಟವಶಾತ್ ವಿದ್ಯುತ್ ತಂತಿ ಬಸ್ ಮೇಲೆ ಬಿದ್ದಿಲ್ಲ. 20 ಜನ ಪ್ರಯಾಣಿಕರು ಬಸ್‌ನಲ್ಲಿದ್ದರು. ಯಾವುದೇ ಅನಾಹುತವಾಗಿಲ್ಲ.