ಗೋಣಿಕೊಪ್ಪ: ಹಿಂಬದಿಯಿಂದ ಬಂದ ಖಾಸಗಿ ಬಸ್‌ಗೆ ದಾರಿ ಬಿಡಲಿಲ್ಲ ಎಂಬ ಕಾರಣಕ್ಕೆ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಪ್ರಕರಣ ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಬಸ್ ಚಾಲಕ ಭರತ್ ಕುಮಾರ್, ಕಂಡಕ್ಟರ್ ತಿಮ್ಮಯ್ಯ ಹಾಗೂ ಕ್ಲೀನರ್ ದರ್ಶನ್ ವಿರುದ್ಧ ಪ್ರಕರಣ ದಾಖಲಾಗಿದೆ.
ಶುಕ್ರವಾರ ಬೆಳಗ್ಗೆ ಕಾನೂರು ಗ್ರಾಮದಿಂದ ಬೆಕ್ಕೆಸೊಡ್ಲೂರು, ಪೊನ್ನಂಪೇಟೆ ಮಾರ್ಗವಾಗಿ ಗೋಣಿಕೊಪ್ಪಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ಖಾಸಗಿ ಬಸ್‌ಗೆ ದಾರಿ ಬಿಡಲಿಲ್ಲ ಎಂಬ ಕಾರಣಕ್ಕೆ ಶುಕ್ರವಾರ ಸಂಜೆ ಪೊನ್ನಂಪೇಟೆಯಲ್ಲಿ ಸಾರಿಗೆ ಬಸ್‌ನ್ನು ತಡೆದು ಚಾಲಕನಿಗೆ ಅವಾಚ್ಯ ಶಬ್ದದಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ.
ಕೆಎಸ್‌ಆರ್‌ಟಿಸಿ ಬಸ್ ಚಾಲಕ ಯಶ್ವಂತ್ ಗೋಣಿಕೊಪ್ಪ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊನ್ನಂಪೇಟೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.