ರಾಯಚೂರು ಸಾರಿಗೆ ನಿಗಮಗಳ ನೌಕರರಿಗೆ 38 ತಿಂಗಳ ಬಾಕಿ ವೇತನ ಸೇರಿ ವಿವಿಧ ಬೇಡಿಕೆಗಳು ಈಡೇರಿಕೆಗೆ ಒತ್ತಾಯಿಸಿ ಅ.5 ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಮಾಡಲಾಗುತ್ತದೆಂದು ಎಸ್ಸಿಎಸ್ಟಿ ನೌಕರರ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಜಿ.ಮುದ್ದುಕೃಷ್ಣ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನೌಕರರ ಹೋರಾಟಕ್ಕೆ ಮುಂದಾಗುತ್ತಿರುವಾಗಲೇ ರಾಜ್ಯ ಸರ್ಕಾರ ಎಸ್ಮಾ ಜಾರಿಗೊಳಿಸುವ ಬೆದರಿಕೆ ಹಾಕುತ್ತಿದೆ. ಆದರೆ ನಿಗಮದ ನೌಕರರ ನ್ಯಾಯೋಚಿತ ಬೇಡಿಕೆಗಳನ್ನು ಪರಿಹರಿಸಲು ಮುಂದಾಗುತ್ತಿಲ್ಲ. 2024 ರಿಂದ ವೇತನ ಪರಿಷ್ಕರಣೆ ಕುರಿತು ಕ್ರಮಕ್ಕೆ ಮುಂದಾಗುತ್ತಿಲ್ಲ. 2024 ಡಿಸೆಂಬರ್ 29 ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು.
2025 ಜನವರಿ 15 ರಂದು ಸಭೆ ಕರೆಯುವದಾಗಿ ಭರವಸೆ ನೀಡಿದ್ದರು. ಏಪ್ರಿಲ್ 15 ರಂದು ತ್ರಿಪಕ್ಷೀಯ ಸಭೆ ಸಿಎಂ ನಡೆಸಿ ಅತಿ ಶೀಘ್ರದಲ್ಲಿಯೇ ಮತ್ತೊಂದು ಸಭೆ ನಡೆಸುವದಾಗಿ ಭರವಸೆ ನೀಡಿದ್ದರು. ಜು.4 ರಂದು ನಡೆದ ಸಭೆಯಲ್ಲಿ ಸಾರಿಗೆ ನೌಕರರಿಗೆ ವೇತನ ಪರಿಷ್ಕರಣೆ 2023 ರಲ್ಲಿ ವೇತನ ಪರಿಷ್ಕರಣೆ ಜಾರಿಗೊಳಿಸಲಾಗಿದೆ. 2027 ಕ್ಕೆ ವೇತನ ಪರಿಷ್ಕರಣೆ ಮಾಡುವದಾಗಿ ಹೇಳಾಲಾಗಿತ್ತು. ಆದರೆ ಇದುವರೆಗೆ 38 ತಿಂಗಳ ಹಿಂಬಾಕಿ ಇಲ್ಲ ಎಂದು ಹೇಳಿದ್ದರು.
ನಿರ್ಧಾರಕ್ಕೆ ಬಾರದೇ ಇರುವರಿಂದ ಜು.15 ರಂದು ಮುಖ್ಯಮಂತ್ರಿಗಳು ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ವ್ಯವಸ್ಥಾಪಕರಿಗೆ ಮುಷ್ಕರ ನೋಟಿಸ್ ನೀಡಲಾಗಿದೆ. ಮುಖ್ಯಮಂತ್ರಿಗಳು ಅ.04 ರಂದು ಸಭೆ ಕರೆದಿದ್ದು ಸಾರಿಗೆ ನೌಕರರ ಬೇಡಿಕೆಗಳಿಗೆ ಸ್ಪಂದಿಸದೇ ಇದ್ದಲ್ಲಿ ಅನಿರ್ದಿಷ್ಟ ಮುಷ್ಕರ ಮುಂದುವರೆಯುತ್ತದೆ . ಜಿಲ್ಲೆಯ ಏಳು ಘಟಕಗಳ ನೌಕರರು ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆಗೆ ಬೆಂಬಲಿಸಿ ಭಾಗವಹಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಸ್ಟಾಫ್ ಮತ್ತು ವರ್ಕಸ್ಟ್ ಯೂನಿಯನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಶೈಲರೆಡ್ಡಿ ,ಯೂನಿಯನ್ ಅಧ್ಯಕ್ಷ ಎಸ್.ಎಂ.ಪೀರ, ಎಸ್ಸಿಎಸ್ಟಿ ನೌಕರರ ಅಸೋಸಿಯೇಷನ್ ಅಧ್ಯಕ್ಷ ಜಂಬಣ್ಣ ಇದ್ದರು.