ರಾಣೆಬೆನ್ನೂರ: ಸಾರಿಗೆ ಸಂಸ್ಥೆ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಟನೆ ತಾಲೂಕಿನ ದಂಡಗಿಹಳ್ಳಿ ಬಳಿ ಭಾನುವಾರ ನಡೆದಿದೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಚಿಕ್ಕಲವಾಳ ಗ್ರಾಮದ ಧರ್ಮಪ್ಪ ಅಣ್ಣಪ್ಪ ಕೋಣೆ (45) ಮೃತ ಬೈಕ್ ಸವಾರ.
ಈತ ಕುರಿ ಕಾಯುತ್ತ ದಂಡಗಿಹಳ್ಳಿ ಬಂದಿದ್ದರು. ಇಲ್ಲಿಂದ ತನ್ನ ಪತ್ನಿಯನ್ನು ರಾಣೆಬೆನ್ನೂರ ಬಸ್ ನಿಲ್ದಾಣಕ್ಕೆ ಕರೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಸಾರಿಗೆ ಸಂಸ್ಥೆ ಬಸ್ ಬಂದು ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಧರ್ಮಪ್ಪ ಅವರನ್ನು ಕೂಡಲೇ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.