ಕೂಡ್ಲಿಗಿ ತಾಲೂಕಿನ ನರಸಿಂಹಗಿರಿ ಗ್ರಾಮದಲ್ಲಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ಆರೋಗ್ಯ ಇಲಾಖೆ ಉನ್ನತ ಅಧಿಕಾರಿಗಳ ಸಭೆಯಲ್ಲಿ ನಡೆಯಿತು. ಕಲಬುರಗಿ ವಿಭಾಗದ ಆರೋಗ್ಯ ಅಧಿಕಾರಿ ಸುನೀಲ್ ಕುಮಾರ್, ಕಾರ್ಯಪಾಲಕ ಇಂಜಿನಿಯರ್ ವೆಂಕಟಸ್ವಾಮಿ ಇದ್ದರು 
ಜಿಲ್ಲೆ

ಟ್ರಾಮಾ ಕೇರ್ ನಿರ್ಮಾಣ ಗುರಿ

ಗಾಯತ್ರಿ ಮಾಲಿಪಾಟೀಲ್

ಕೂಡ್ಲಿಗಿ: ಆರೋಗ್ಯವಂತ ಸಮಾಜ ನಿರ್ಮಿಸುವುದು ನನ್ನ ಗುರಿಯಾಗಿದೆ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.

ನರಸಿಂಹನಗಿರಿ ಗ್ರಾಮದ ಶಾಸಕರ ನಿವಾಸದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಆರೋಗ್ಯ ಇಲಾಖೆ ಉನ್ನತ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯನ್ನು 100 ಹಾಸಿಗೆಗಳಿಂದ 150 ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಇರುವ ಕಾರಣ ಟ್ರಾಮಾ ಕೇರ್ ಸೆಂಟರ್ ನಿರ್ಮಿಸುವ ಉದ್ದೇಶ ಇದೆ ಎಂದರು.

ಸಾರ್ವಜನಿಕ ಆಸ್ಪತ್ರೆಯ ವೈದ್ಯರಿಗೆ ವಸತಿ ಗೃಹ ನಿರ್ಮಿಸುತ್ತಿದ್ದು, ಇದರಿಂದ ರೋಗಿಗಳಿಗೆ ಸಕಾಲಕ್ಕೆ ಚಿಕಿತ್ಸೆ ನೀಡಲು ಅನುಕೂಲವಾಗಲಿದೆ. ದೋಬಿ ಕೊಠಡಿ ಹಾಗೂ ಸುಸಜ್ಜಿತ ವಾರ್ಡ್‌ಗಳ ಜತೆ ಮೂಲ ಸೌಕರ್ಯ ಒದಗಿಸಲು ಯೋಜನೆ ರೂಪಿಸಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು. ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಿಬ್ಬಂದಿ, ಸಮುದಾಯ ಹಾಗೂ ಉಪ ಆರೋಗ್ಯ ಕೇಂದ್ರಗಳಿಗೆ ಸೌಕರ್ಯ ಒದಗಿಸಲು ಚರ್ಚಿಸಲಾಗುವುದು ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ತಿಳಿಸಿದರು.

ಕಲಬುರಗಿ ವಿಭಾಗದ ಆರೋಗ್ಯ ಅಧಿಕಾರಿ ಸುನೀಲ್ ಕುಮಾರ್, ಕಾರ್ಯಪಾಲಕ ಇಂಜಿನಿಯರ್ ವೆಂಕಟಸ್ವಾಮಿ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸಂತೋಷ್ ಇದ್ದರು.