ಚಾಮರಾಜನಗರ: ( accident ) ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗ ಮಹಿಳೆ ವಾಂತಿ ಬರುತ್ತಿದೆ ಎಂದು ತಲೆಯನ್ನು ಬಸ್ನಿಂದ ಆಚೆ ಹಾಕಿದ್ದಾರೆ. ಟಿಪ್ಪರ್ ಓವರ್ ಟೇಕ್ ವೇಳೆ ರುಂಡ ಕಟ್ ಹಾಗಿ ಮಹಿಳೆ ಸಾವನ್ನಪ್ಪಿದ್ದಾಳೆ. ನಂಜನಗೂಡು ತಾಲೂಕಿನ ಮುದ್ದಹಳ್ಳಿಗೇಟ್ (ಕಡುಬಿನಕಟ್ಟೆ)ನಲ್ಲಿ ಶನಿವಾರ ( 25-1-2025) ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಮೃತ ಮಹಿಳೆಯನ್ನು ಬೇಗೂರು ಸಮೀಪದ ಆಲಹಳ್ಳಿ ಗ್ರಾಮದ ಶಿವಲಿಂಗಮ್ಮ (43) ಎಂದು ಗುರುತಿಸಲಾಗಿದೆ. ಕೆಎಸ್ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ವಾಂತಿ ಮಾಡಲು ಕಿಟಕಿಯಿಂದ ತಲೆ ಹೊರಗೆ ಹಾಕಿದ ವೇಳೆ ಓವರ್ ಟೇಕ್ ಮಾಡುತ್ತಿದ್ದ ಟಿಪ್ಪರ್ ತಗುಲಿ ಮಹಿಳೆಯ ರುಂಡ ಕಟ್ ಆಗಿದೆ.
ಗುಂಡ್ಲುಪೇಟೆಯಿಂದ ನಂಜನಗೂಡು ಕಡೆಗೆ ಹೊರಟ್ಟಿದ್ದ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಅಚಾನಕ್ ಆಗಿ ತಮ್ಮ ತಲೆಯನ್ನು ಕಿಟಕಿಯಿಂದ ಹೊರ ಹಾಕಿದ್ದು, ಈ ವೇಳೆ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಮಹಿಳೆ ತಲೆ ಎದುರಿನಿಂದಲೇ ಹಾದು ಹೋಗುತ್ತಿದ್ದ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಿಂದ ಮೃತಪಟ್ಟಿದ್ದಾರೆ ಎಂದು ಚಾಮರಾಜನಗರ ಪೊಲೀಸರು ತಿಳಿಸಿದ್ದಾರೆ.
ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಸ್ ಅನ್ನು ವಶಕ್ಕೆ ಪಡೆದಿದ್ದಾರೆ. ಪ್ರಯಾಣಿಕರನ್ನು ಬೇರೆ ಬಸ್‌ಗೆ ಕಳುಹಿಸಲಾಯಿತು. ಶಿವಲಿಂಗಮ್ಮ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.ಶಿವಲಿಂಗಮ್ಮ ಅವರ ಪತಿ ರೇವಣ್ಣ ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದರು. ಇವರ ಹುಟ್ಟೂರು ಕುಂಡ್ಲುಬೇಟ ತಾಲೂಕು ಆಲಹಳ್ಳಿಯಾಗಿದ್ದು, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರಿದ್ದು, ಸಂಬಂಧಿಕರ ಮನೆಯಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಬೆಂಗಳೂರಿನಿಂದ ಹಿಂದಿರುಗಿದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.