ಜಿಲ್ಲೆ

ಧರ್ಮಸ್ಥಳ ವ್ಯಾಪ್ತಿಯಲ್ಲಿ ಮರ ಕಡಿಯುವಾಗ ಅವಘಡ: ಸ್ಥಳದಲ್ಲೇ ಮೂವರ ಸಾವು

arunakunigal

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪಟ್ರಮೆಯಲ್ಲಿ ಮರ ಕಡಿಯುತ್ತಿದ್ದ ವೇಳೆ ವೇಳೆ ಮರ ಬಿದ್ದು ಮೂವರು ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.

ಮೃತರನ್ನು ಪಟ್ರಮೆ ರಾಮಣ್ಣ ಕುಂಬಾರ ಅವರ ಪುತ್ರ ಪ್ರಶಾಂತ್ ಕುಂಬಾರ(23), ಸೇಸಪ್ಪ ಪೂಜಾರಿ ಅವರ ಪುತ್ರ ಕುತ್ರಿಜಾಲುವಿನ ಸ್ವಸ್ತಿಕ್ ಪೂಜಾರಿ (25) ಮತ್ತು ಪ್ರಶಾಂತ್ (23), ಗಣೇಶ್ ಉಪ್ಪಿನಂಗಡಿ (38) ಎಂದು ಗುರುತಿಸಲಾಗಿದೆ. ಇದನ್ನೂ ಓದಿರಿ ಭೂಮಿ- ಕಾವೇರಿ ತಂತ್ರಾಂಶ ಸರ್ವರ್​ ಡೌನ್​: ಜನರ ಪರದಾಟ, ಸರ್ಕಾರಕ್ಕೆ ಹಿಡಿಶಾಪ

ಪಟ್ರಮೆ ಗ್ರಾಮದ ಅನಾರು ಬಳಿ ಕಾಯಿಲ ಸಮೀಪ ಲೋಕಯ್ಯ ಗೌಡ ಎಂಬುವರ ಜಾಗದಲ್ಲಿ ಧೂಪದ ಮರವೊಂದನ್ನು ಕಡಿದು ಉರುಳಿಸುವ ವೇಳೆ ಈ ಅವಘಡ ಸಂಭವಿಸಿದೆ. ಮರಕ್ಕೆ ಕಟ್ಟಿದ್ದ ಹಗ್ಗ ತುಂಡಾಗಿ ಏಕಾಏಕಿ ಮೂವರ ಮೇಲೆ ಮರ ಬಿದ್ದಿದೆ. ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.

ಬೆಳ್ತಂಗಡಿ ವೃತ್ತ ನಿರೀಕ್ಷಕ ಪಿ.ಜಿ. ಸಂದೇಶ್, ಧರ್ಮಸ್ಥಳ ಪೊಲೀಸ್ ಠಾಣೆ ಉಪನಿರೀಕ್ಷಕ ಪವನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.