ಜಿಲ್ಲೆ

ಗುಂಡ್ಯದಲ್ಲಿ ಕಾರಿನ ಮೇಲೆ ಮರ ಬಿದ್ದು ಚಾಲಕ ಸಾವು

reportermng

ಗುಂಡ್ಯ: ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಅಡ್ಡಹೊಳೆಯಲ್ಲಿ ಭಾನುವಾರ ಬೆಳಗ್ಗೆ ಕಾರಿನ ಮೇಲೆ ಮರಬಿದ್ದು ಚಾಲಕ ಮೃತಪಟ್ಟಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಶಬ್ದ ಬಂದ ಹಿನ್ನೆಲೆಯಲ್ಲಿ ಚಾಲಕ ಕಾರನ್ನು ನಿಲ್ಲಿಸಿ ಬಾನೆಟ್ ತೆಗೆಯುತ್ತಿದ್ದ ವೇಳೆ ಹೆದ್ದಾರಿ ಬದಿಯಲ್ಲಿದ್ದ ಹಾಲುಮಡ್ಡಿ ಮರವೊಂದು ಕಾರು ಹಾಗೂ ಚಾಲಕನ ಮೇಲೆಯೇ ಬಿದ್ದಿದೆ. ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಮಹಿಳೆ ಹಾಗೂ ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದವರು ಉಡುಪಿ ಮೂಲದವರಾಗಿದ್ದು ಬೆಂಗಳೂರಿಗೆ ತೆರಳುತ್ತಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.