ಜಿಲ್ಲೆ

ಮರಗಳು ಬೆಂಕಿಗಾಹುತಿ

ರಾಜಣ್ಣ

ಹಲಗೂರು: ಸಮೀಪದ ಸಾಗ್ಯ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಬೆಂಕಿ ತಗುಲಿದ ಪರಿಣಾಮ ವಿವಿಧ ತಳಿಯ ಮರಗಳು ಬೆಂಕಿಗೆ ಆಹುತಿಯಾಗಿವೆ.


ಸಾಗ್ಯ ಗ್ರಾಮದ ರೈತ ರಾಜಣ್ಣ ಅವರು ಮೂರು ಎಕರೆ ಜಮೀನಿನಲ್ಲಿ ತೆಂಗು, ಅಡಕೆ, ಮಹಾಘನಿ, ಮಾವು ಸೇರಿದಂತೆ ವಿವಿಧ ಜಾತಿಯ ಮರಗಳನ್ನು ಬೆಳೆಸಿದ್ದರು. ಸೋಮವಾರ ಮಧ್ಯಾಹ್ನ ತೆಂಗಿನ ಮರಕ್ಕೆ ವಿದ್ಯುತ್ ಸ್ಪರ್ಶವಾಗಿದ್ದು, ಬೆಂಕಿ ಇಡೀ ತೋಟವನ್ನು ಆವರಿಸಿಕೊಂಡಿದೆ. ತೋಟದಲ್ಲಿ ನೀರು ಹಾಯಿಸಲು ಅಳವಡಿಸಿದ್ದ ಹನಿ ನೀರಾವರಿ ಪೈಪುಗಳು ಸುಟ್ಟು ಹೋಗಿವೆ. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ನೀಡುವಂತೆ ರೈತ ರಾಜಣ್ಣ ಆಗ್ರಹಿಸಿದ್ದಾರೆ.


ಹಲಗೂರು ಪೊಲೀಸ್ ಠಾಣೆಯ ಎಎಸ್ಸೈ ಶಿವಣ್ಣ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.