ಜಿಲ್ಲೆ

ನಟಿ ಬಿ.ಸರೋಜಾದೇವಿಗೆ ಶ್ರದ್ಧಾಂಜಲಿ

ಆರ್.ಕೃಷ್ಣ

ಮೈಸೂರು: ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಸರೋಜಾದೇವಿ ಅವರಿಗೆ ಕೆವಿಕೆ ಫೌಂಡೇಶನ್‌ನಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕೆವಿಕೆ ಫೌಂಡೇಷನ್ ಅಧ್ಯಕ್ಷೆ ಖುಷಿ ವಿನು ಮಾತನಾಡಿ, ಕನ್ನಡ ಸೇರಿದಂತೆ ಹಲವು ಭಾಷೆಗಳ ಚಿತ್ರದಲ್ಲಿ ನಟಿಸಿದ್ದ ಹಿರಿಯ ನಟಿ ಬಿ.ಸರೋಜಾದೇವಿ ಅವರ ನಿಧನ ದುಃಖ ತರಿಸಿದೆ. ಕನ್ನಡಿತಿಯಾಗಿ ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಸೇರಿದಂತೆ ಸುಮಾರು 200 ಚಿತ್ರಗಳಲ್ಲಿ ನಟಿಸಿದ್ದರು ಎಂದರು.

ಸರೋಜಾದೇವಿ ಎಂದಾಕ್ಷಣ ಕಿತ್ತೂರು ರಾಣಿ ಚನ್ನಮ್ಮ, ಬಬ್ರುವಾಹನ, ಭಾಗ್ಯವಂತರು, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ ಅವರ ಮನೋಜ್ಞ ಅಭಿನಯ ಕಣ್ಣಮುಂದೆ ಬರುತ್ತದೆ. ಸದಭಿರುಚಿಯ ಚಿತ್ರಗಳ ಮೂಲಕ ಹಲವು ದಶಕಗಳ ಕಾಲ ಸಿನಿಪ್ರಿಯರನ್ನು ರಂಜಿಸಿದ್ದ ಅವರ ಅಗಲಿಕೆ ಭಾರತೀಯ ಚಿತ್ರರಂಗಕ್ಕಾದ ಬಹುದೊಡ್ಡ ನಷ್ಟ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದರು.

ದುರ್ಗಾ ಫೌಂಡೇಷನ್ ಅಧ್ಯಕ್ಷೆ ರೇಖಾ ಶ್ರೀನಿವಾನ್, ಬಿಜೆಪಿ ಮುಖಂಡ ಕೇಬಲ್ ಮಹೇಶ್, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷ ಅಪೂರ್ವ ಸುರೇಶ್, ನಗರಪಾಲಿಕೆ ನಾಮನಿರ್ದೇಶಿತ ಮಾಜಿ ಸದಸ್ಯ ಜಗದೀಶ್, ಮುಖಂಡರಾದ ನೀಲಾ, ಜಿ.ರಾಘವೇಂದ್ರ, ಎಸ್.ಎನ್. ರಾಜೇಶ್, ಜತ್ತಿ ಪ್ರಸಾದ್, ಪುರುಷೋತ್ತಮ್, ಸುಚೇಂದ್ರ, ಹರೀಶ್‌ನಾಯ್ಡು, ಕಿರಣ್ ಇತರರು ಸಂತಾಪ ಸೂಚಿಸಿದರು.