ಪಿರಿಯಾಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆರೋಗ್ಯ ಕವಚ(108) ಆಂಬುಲೆನ್ಸ್ ಚಾಲಕ ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು. 
ಜಿಲ್ಲೆ

ಆಂಬುಲೆನ್ಸ್ ಚಾಲಕ ಮಂಜುನಾಥ್‌ಗೆ ಸನ್ಮಾನ

ಲೋಕೇಶ್ ಮನು. ಡಿ

ಪಿರಿಯಾಪಟ್ಟಣ: ತಾಲೂಕಿನ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ತಾಲೂಕಿನಲ್ಲಿ ನಿಗದಿತ ಸಮಯದಲ್ಲಿ ಅತಿ ಹೆಚ್ಚು ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಿ ಅವರ ಪ್ರಾಣ ರಕ್ಷಣೆಗಾಗಿ ಉತ್ತಮ ಸೇವೆ ಸಲ್ಲಿಸಿದ ಆರೋಗ್ಯ ಕವಚ(108) ಆಂಬುಲೆನ್ಸ್ ಚಾಲಕ ಮಂಜುನಾಥ್ ಅವರನ್ನು ಗೌರವಿಸಲಾಯಿತು.

ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಅನಿಲ್ ಮಾತನಾಡಿ, ಅಪಘಾತಗಳಾದ ತುರ್ತು ಸಂದರ್ಭದಲ್ಲಿ ತಕ್ಷಣ ಸ್ಥಳಕ್ಕೆ ಧಾವಿಸಿ, ಜನರ ಪ್ರಾಣ ಉಳಿಸಲು ಶ್ರಮಿಸುವ ಆಂಬುಲೆನ್ಸ್ ಚಾಲಕರ ಕಾರ್ಯ ಶ್ಲಾಘನೀಯ. ಅವರ ಸೇವೆಯನ್ನು ಗುರುತಿಸಿ, ಸನ್ಮಾನಿಸುವುದರ ಜತೆಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಸೇವೆ ಸಲ್ಲಿಸಲು ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.

ವೈದ್ಯರಾದ ಶಿವಪ್ರಕಾಶ್, ಸದಾಶಿವ, ವಿಜಯಕುಮಾರ್, ಪ್ರಮೋದ್, ವಿಕ್ರಂ, ಶೋಭಾ, ಸಿಬ್ಬಂದಿ ಭಾಗವಹಿಸಿದ್ದರು.