ಉಪ್ಪಿನಂಗಡಿ: ಇಲ್ಲಿನ ರಾಮನಗರದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮತ್ತು ಸೌಹಾರ್ದ ಯಕ್ಷಗಾನ ಸಮಿತಿ ಸಹಯೋಗದಲ್ಲಿ ಶ್ರೀ ಶಾರದಾ ಕಲಾಮಂಟಪದಲ್ಲಿ ಜರುಗಿದ 30ನೇ ವರ್ಷದ ಶ್ರೀ ಶಾರದೋತ್ಸವದಲ್ಲಿ ಉಪನ್ಯಾಸಕ, ಅರ್ಥಧಾರಿ ಗುಡ್ಡಪ್ಪ ಬಲ್ಯರನ್ನು ಸನ್ಮಾನಿಸಲಾಯಿತು.
ಕಲಾವಿದ ಹರೀಶ್ ಆಚಾರ್ಯ ಬಾರ್ಯ ಅಭಿನಂದನಾ ಭಾಷಣ ಮಾಡಿದರು. ಸೌಹಾರ್ದ ಯಕ್ಷಗಾನ ಸಮಿತಿಯ ಅಧ್ಯಕ್ಷ ಉಮೇಶ ಶೆಣೈ ಎನ್., ಶಾರದೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ರಾಮಚಂದ್ರ ಮಣಿಯಾಣಿ, ಅಧ್ಯಕ್ಷ ಚಂದ್ರಶೇಖರ ಮಡಿವಾಳ, ಕೋಶಾಧಿಕಾರಿ ಕಂಗ್ವೆ ವಿಶ್ವನಾಥ ಶೆಟ್ಟಿ, ಕಾರ್ಯದರ್ಶಿ ದೀಪಕ್ ಪೈ, ಸಹಕಾರ್ಯದರ್ಶಿ ಗಣೇಶ್ ಭಂಡಾರಿ, ಮಾಜಿ ಯೋಧ ವಿಶ್ವನಾಥ ಶೆಣೈ, ಹಿರೇಬಂಡಾಡಿ ಪ್ರೌಢಶಾಲಾ ಮುಖ್ಯಶಿಕ್ಷಕ ಕೆ.ಶ್ರೀಧರ ಭಟ್, ಜಯಂತ ಪುರೋಳಿ, ಹರಿರಾಮಚಂದ್ರ ಉಪಸ್ಥಿತರಿದ್ದರು.
ಕಾಳಿಕಾಂಬ ಯಕ್ಷಗಾನ ಸಂಘದ ಕಾರ್ಯದರ್ಶಿ ಶ್ರೀಪತಿ ಭಟ್ ಸ್ವಾಗತಿಸಿದರು. ನಿವೃತ್ತ ಉಪನ್ಯಾಸಕ ಮಹಾಲಿಂಗೇಶ್ವರ ಭಟ್ ಪೆರಿಯಡ್ಕ ಸನ್ಮಾನ ಪತ್ರ ವಾಚಿಸಿದರು. ಉಪಾಧ್ಯಕ್ಷ ಸಂಜೀವ ಪಾರೆಂಕಿ ವಂದಿಸಿದರು. ಸೌಹಾರ್ದ ಯಕ್ಷಗಾನ ಸಮಿತಿಯ ಸಂಚಾಲಕ ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.