ಜಿಲ್ಲೆ

ಕಾರ್ಗಿಲ್ ಯುದ್ಧದ ಯೋಧಗೆ ಗೌರವ

ಇಂದಿರಾ ಎನ್ ಕೆ

ಕುಂದಾಪುರ: ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಕಾರ್ಗಿಲ್ ವಿಜಯ ದಿನದ ಅಂಗವಾಗಿ ಕಾರ್ಗಿಲ್ ವಿಜಯೋತ್ಸವ ಆಚರಣೆ ಕಾರ್ಯಕ್ರಮ ಗಂಗೊಳ್ಳಿಯ ಎಸ್.ವಿ.ಪದವಿಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ್ ನಾಯಕ್ ರೋಟರಿ ಒಳಾಂಗಣದಲ್ಲಿ ಮಂಗಳವಾರ ನಡೆಯಿತು.

ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ಯೋಧ ಸಂತೋಷ್ ಕುಮಾರ್ ಶೆಟ್ಟಿ ಬಿ. ಅವರನ್ನು ರೋಟರಿ ಕ್ಲಬ್ ವತಿಯಿಂದ ಗೌರವಿಸಲಾಯಿತು. ಮಾಜಿ ಸೈನಿಕ ದಿನಕರ ಶೆಣೈ ಅವರು ಕಾರ್ಗಿಲ್ ಯುದ್ಧದ ಬಗ್ಗೆ ತಿಳಿಸಿದರು. ಗಂಗೊಳ್ಳಿ ಕೋಟರಿ ಕ್ಲಬ್‌ನ ನಿಕಟಪೂರ್ವ ಅಧ್ಯಕ್ಷೆ ಚಂದ್ರಕಲಾ ತಾಂಡೇಲ, ರೋಟರಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ರಾಮನಾಥ್ ಚಿತ್ತಾಲ್ ವಂದಿಸಿದರು.