ಮೆಸ್ಕಾಂ ಕಿರಿಯ ಇಂಜಿನಿಯರ್ ಪ್ರಕಾಶ ಮೊಗವೀರ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು 
ಜಿಲ್ಲೆ

ಮೆಸ್ಕಾಂ ಕಿರಿಯ ಇಂಜಿನಿಯರ್ ಪ್ರಕಾಶ್‌ಗೆ ಸನ್ಮಾನ

ಇಂದಿರಾ ಎನ್ ಕೆ

ಗಂಗೊಳ್ಳಿ: ಮೆಸ್ಕಾಂನ ವಂಡ್ಸೆ ಶಾಖೆ, ತಲ್ಲೂರು ಉಪ ವಿಭಾಗದ ಕಿರಿಯ ಇಂಜಿನಿಯರ್ ಪ್ರಕಾಶ ಮೊಗವೀರ ಬೀಳ್ಕೊಡುಗೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹರೀಶ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು.

ನಾಗರಾಜ ಮಂಜರು ಮಾರಣಕಟ್ಟೆ, ವಕೀಲ ಪ್ರಸನ್ನಕುಮಾರ್ ಶೆಟ್ಟಿ ಕೆರಾಡಿ, ಕೊಲ್ಲೂರು ದೇವಳದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ, ಜಿ.ಪಂ ಮಾಜಿ ಸದಸ್ಯ ಮಂಜಯ್ಯ ಶೆಟ್ಟಿ ಹರ್ಕೂರು, ಕುಂದಾಪುರ ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಶೇಖರ ಪೂಜಾರಿ, ಕಾರ್ಯದರ್ಶಿ ವಿಜಯ್ ಗೋವಿಂದ, ವಿದ್ಯುತ್ ಗುತ್ತಿಗೆದಾರರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ, ನಾರಾಯಣ ನಾಯಕ್ ನೇರಳಕಟ್ಟೆ, ವಂಡ್ಸೆ ಗ್ರಾಪಂ ಅಧ್ಯಕ್ಷೆ ಗೀತಾ ಅವಿನಾಶ್, ಚಿತ್ತೂರು ಗ್ರಾಪಂ ಅಧ್ಯಕ್ಷ ರವಿರಾಜ ಶೆಟ್ಟಿ, ವಿದ್ಯುತ್ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಜಯಂತ್ ಶೆಟ್ಟಿ, ಆಜ್ರಿ, ಗುತ್ತಿಗೆದಾರ ಚಂದ್ರ ಶೆಟ್ಟಿ ಚಿತ್ತೂರು, ಶ್ರೀನಿವಾಸ ಪೂಜಾರಿ ಕಲ್ಮಾಡಿ ಉಪಸ್ಥಿತರಿದ್ದರು. ಸತೀಶ್ ಕೊಠಾರಿ ಸ್ವಾಗತಿಸಿದರು. ಸತೀಶ್ ಕೊಠಾರಿ ವಂದಿಸಿದರು. ಶಾಖಾಧಿಕಾರಿ ರಾಜೇಶ್ ವಂಡ್ಸೆ, ಶಶಿಧರ ಶೆಟ್ಟಿ ವಂಡ್ಸೆ ಕಾರ್ಯಕ್ರಮ ನಿರೂಪಿಸಿದರು.