ಮೂಲ್ಕಿ: ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕ ಸಹಾಯ ಮಾಡುವ ಮೂಲಕ ಸೇವಾ ಸಂಸ್ಥೆ ಉತ್ತಮ ಸಮಾಜ ಸೇವೆ ಮಾಡುತ್ತಿದೆ ಎಂದು ಬಳ್ಕುಂಜೆ ಗ್ರಾಪಂ ಉಪಾಧ್ಯಕ್ಷ ನವೀನ್ ಶೆಟ್ಟಿ ಹೇಳಿದರು.
ಕವತ್ತಾರು ಗೌತಮಬುದ್ಧ ನಗರ ಡಾ.ಬಿ.ಆರ್.ಅಂಬೇಡ್ಕರ್ ಭವನ ಸಮಿತಿ ವತಿಯಿಂದ, ಕವತ್ತಾರು ಗ್ರಾಮದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಬಡ ವಿದ್ಯಾರ್ಥಿಗಳಿಗೆ ಹಾಗೂ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಿ ಮಾತನಾಡಿದರು.
ದ.ಸಂ.ಸ. ಮುಖಂಡ ಶೇಖರ್ ಹೆಜಮಾಡಿ ಡಾ.ಅಂಬೇಡ್ಕರ್ ಅವರ ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು. ಅಂಬೇಡ್ಕರ್ ಭವನ ಸಮಿತಿಯ ಅಧ್ಯಕ್ಷ ಭಾಸ್ಕರ ಕವತ್ತಾರು ಅಧ್ಯಕ್ಷತೆ ವಹಿಸಿದ್ದರು. ಸಮಾಜ ಸೇವಕ ಸುಧಾಕರ ನಂಬಿಯಾರ್, ಅಂಬೇಡ್ಕರ್ ಭವನ ಸಮಿತಿ ಉಪಾಧ್ಯಕ್ಷ ಸಂದೀಪ್ ಕುಂದರ್, ಕೋಶಾಧಿಕಾರಿ ಸೋಮಾನಂದ, ಪ್ರಧಾನ ಕಾರ್ಯದರ್ಶಿ ರಮಾನಂದ ಮತ್ತಿತರರು ಉಪಸ್ಥಿತರಿದ್ದರು.