ಹುಬ್ಬಳ್ಳಿ: ಕರ್ನಾಟಕ ವಿಧಾನಸಭೆ ಚುನಾವಣೆಯು ಡಬಲ್ ಇಂಜಿನ್ ಬಿಜೆಪಿ ಸರ್ಕಾರ ಹಾಗೂ ಟ್ರಬಲ್ ಇಂಜಿನ್ ಕಾಂಗ್ರೆಸ್ ನಡುವಿನ ಹೋರಾಟವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ, ರಾಜ್ಯಸಭಾ ಸದಸ್ಯ ಗೌರವ ಭಾಟಿಯಾ ಹೇಳಿದರು.
ಹುಬ್ಬಳ್ಳಿಯಲ್ಲಿ ಭಾನುವಾರ ಬಿಜೆಪಿ ಮಾಧ್ಯಮ ಕೇಂದ್ರ ಉದ್ಘಾಟಿಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಟ್ರಬಲ್ ಇಂಜಿನ್ ಆಗಿದೆ. ಕಾಂಗ್ರೆಸ್ ನಾಯಕರು ಪರಸ್ಪರ ಕಿತ್ತಾಡುತ್ತಿದ್ದಾರೆ. ಒಬ್ಬರು ಎಡಕ್ಕೆ ಹೊರಟರೆ, ಮತ್ತೊಬ್ಬರು ಬಲಕ್ಕೆ ಹೊರಟಿದ್ದಾರೆ ಎಂದು ಟೀಕಿಸಿದರು.
ಟ್ರಬಲ್ ಇಂಜಿನ್ ಕಾಂಗ್ರೆಸ್ ಅಧಿಕಾರಕ್ಕೆ ಹಪಹಪಿಸುತ್ತಿದ್ದು, ಕಚ್ಚಾಡುತ್ತಿದ್ದಾರೆ. ಡಬಲ್ ಇಂಜಿನ್ ಬಿಜೆಪಿ ಸರ್ಕಾರ ಕನ್ನಡಿಗರ ಹೃದಯ ಗೆದ್ದಿದೆ. ಮತ್ತೊಮ್ಮೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಹೇಳಿದರು.