ಮೈಸೂರು: ಜೆ.ಪಿ.ನಗರದ ಬಳಿ ರಿಂಗ್‌ರೋಡ್‌ನಲ್ಲಿ ಟ್ರಕ್ ಹರಿದು ಬೈಕ್‌ನಲ್ಲಿ ಸಾಗುತ್ತಿದ್ದ ಸೆಸ್ಕ್ ನೌಕರ ಮೃತಪಟ್ಟಿದ್ದಾರೆ.
ರಮಾಬಾಯಿನಗರದ ನಿವಾಸಿ ಹರೀಶ್ ರಾವ್(58) ಮೃತರು. ರಾತ್ರಿಪಾಳಿ ಕರ್ತವ್ಯಕ್ಕೆ ತೆರಳಿದ್ದ ಇವರು ಗುರುವಾರ ಬೆಳಗ್ಗೆ ಬೈಕ್‌ನಲ್ಲಿ ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಟ್ರಕ್ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸವಾರ ಕೆಳಗೆ ಬಿದ್ದಿದ್ದು, ಅವರ ಮೇಲೆ ಟ್ರಕ್ ಹರಿದು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆ.ಆರ್.ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.