ಜಿಲ್ಲೆ

ಮಹಿಳೆಯರಿಗೆ ಕಿರು ಉದ್ದುಮೆಗೆ ಅವಕಾಶ

ಶಿವರಾಜ.ಎಂ

ವಿಜಯವಾಣಿ ಸುದ್ದಿಜಾಲ ತೂಬಗೆರೆ
ಕೃಷಿಯಲ್ಲಿ ಮಹಿಳೆಯರ ಪಾತ್ರ ಬಹಳ ಮುಖ್ಯ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಬಿ.ಜಿ.ಹನುಮಂತರಾಯ ಹೇಳಿದರು.
ಹೋಬಳಿಯ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಅನುಸಂಧಾನ ಪರಿಷತ್‌ನ 95ನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ 3 ದಿನಗಳ ಕಾಲ ತಂತ್ರಜ್ಞಾನ ಹಮ್ಮಿಕೊಳ್ಳಲಾಗಿದ್ದ ಹಿನ್ನೆಲೆಯಲ್ಲಿ ಕೇಂದ್ರದಲ್ಲಿ ಸಿರಿಧ್ಯಾಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ತರಬೇತಿ ಉದ್ಘಾಟಿಸಿ ಮಾತನಾಡಿದರು.
ಸಿರಿಧ್ಯಾಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆಗಳ ಬಗ್ಗೆ ತರಬೇತಿ ಪಡೆಯುವುದು ಅನಿವಾರ್ಯವಾಗಿದೆ. ಮಹಿಳೆಯರಿಗೆ ಮೌಲ್ಯವರ್ಧಿತ ಉತ್ಪನ್ನಗಳ ಕಿರು ಉದ್ದಿಮೆದಾರರಾಗಲು ವಿುಲ ಅವಕಾಶಗಳಿವೆ. ಆದ್ದರಿಂದ ಈ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ತರಬೇತಿಯಲ್ಲಿ ಭಾಗವಹಿಸಿದ ರೈತ ಮತ್ತು ರೈತ ಮಹಿಳೆಯರಿಗೆ ನವಣೆ ಹಾಗು ಹಾರಕದಿಂದ ಮೌಲ್ಯವರ್ಧಿತ ಉತ್ಪಗಳ ತಯಾರಿಕೆಯ ಪ್ರಾತ್ಯಕ್ಷಿಕೆಯನ್ನು ಆಯೋಜಿಸಲಾಗಿತ್ತು, ಈ ತರಬೇತಿಯಲ್ಲಿ ಒಟ್ಟು 45 ರೈತ ಮಹಿಳೆಯರು ಹಾಜರಿದ್ದರು.