ಚಿಕ್ಕಬಳ್ಳಾಪುರ: ಕ್ಷಯರೋಗ ನಿಯಂತ್ರಣ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯು ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.
ಜಿಲ್ಲಾಡಳಿತ ಭವನದ ಸರ್ ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ಕ್ಷಯ ರೋಗ ದಿನಾಚರಣೆ ಉದ್ಘಾಟಿಸಿ ವಾತನಾಡಿದರು.
ವಿಶ್ವ ಕ್ಷಯರೋಗ ನಿರ್ಮೂಲನೆಗಾಗಿ ಕಳೆದ 5 ವರ್ಷಗಳಲ್ಲಿ ಕೈಗೊಂಡಿರುವ ಕ್ರಮಗಳ ವಿವಿಧ ಸೂಚ್ಯಂಕಗಳನ್ನು ರಾಜ್ಯಮಟ್ಟದಲ್ಲಿ ಪರಿಶೀಲಿಸಿದ್ದು, ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಇದಕ್ಕೆ ಇಲ್ಲಿನ ಮರಣ ಪ್ರವಾಣ ಇಳಿಕೆ, ಕ್ಷಯರೋಗಗಳ ಪ್ರಕರಣಗಳ ಇಳಿಕೆ, ಪತ್ತೆ ಹಚ್ಚುವುದು, ಚಿಕಿತ್ಸಾ ವಿಧಾನ ಸೇರಿ 12 ರೀತಿಯ ವಾನದಂಡಗಳಲ್ಲಿ ಪರಿಗಣಿಸಲಾಗಿದೆ ಎಂದರು.
2024ನೇ ಸಾಲಿನಲ್ಲಿ ಜಿಲ್ಲೆಯ 157 ಗ್ರಾಮ ಪಂಚಾಯಿತಿಗಳ ಪೈಕಿ 23 ಪಂಚಾಯಿತಿಗಳು ಕ್ಷಯರೋಗ ಮುಕ್ತ ಪಂಚಾಯಿತಿಗಳೆಂದು ೋಷಿಸಲಾಗಿದೆ. 2025ರೊಳಗೆ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಕ್ಷಯ ರೋಗಮುಕ್ತಗೊಳಿಸಲು ಶ್ರಮಿಸಲಾಗುತ್ತಿದೆ ಎಂದರು.
ಕ್ಷಯ ಮುಕ್ತಗೊಳಿಸಲು ಶ್ರಮಿಸಿದ ಪಂಚಾಯಿತಿಗಳ ಅಧ್ಯಕ್ಷರು, ಸದಸ್ಯರು ಹಾಗೂ ಪಿಡಿಒಗಳನ್ನು ಸನ್ಮಾನಿಸಿ, ಪ್ರವಾಣಪತ್ರ ಹಾಗೂ ಬಹುವಾನ ನೀಡಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್ ಮಹೇಶ್ ಕುವಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಹಳ್ಳಿ ಎನ್. ರಮೇಶ್, ಜಿಪಂ ಉಪ ಕಾರ್ಯದರ್ಶಿ ಅತಿಕ್ ಪಾಷಾ, ತಾಲೂಕು ಆರೋಗ್ಯಾಧಿಕಾರಿಗಳಾದ ಡಾ. ಮಂಜುಳಾ, ಡಾ. ಉವಾ, ನಾಯನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕೃಷ್ಣಪ್ಪ ಮತ್ತಿತರರು ಇದ್ದರು.