ಕ್ಷಯರೋಗ ನಿರ್ಮೂಲನಾ ದಿನಾಚರಣೆ ಜಾಗೃತಿ ಕಾರ್ಯಕ್ರಮವನ್ನು ಡಾ.ತಿಮ್ಮರಾಜು ಉದ್ಘಾಟಿಸಿದರು. ಶಶಾಂಕ್, ಸದಾನಂದ, ಡಾ.ಸುರೇಶ್ ಇತರರಿದ್ದರು. 
ಜಿಲ್ಲೆ

ಕ್ಷಯರೋಗ ನಿರ್ಮೂಲನಾ ದಿನಾಚರಣೆ ಜಾಗೃತಿ

ಲೋಕೇಶ್ ಮನು. ಡಿ

ಅರಸೀಕೆರೆ: ನಾಗರಿಕರು ನೈರ್ಮಲ್ಯ ಕಾಪಾಡಿಕೊಳ್ಳುವ ಮೂಲಕ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ತಿಮ್ಮರಾಜು ಹೇಳಿದರು.

ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಹಾಗೂ ಆರೋಗ್ಯ ಇಲಾಖೆ ವತಿಯಿಂದ ನಗರದ ಜೆ.ಸಿ. ಆಸ್ಪತ್ರೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ದಿನಾಚರಣೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಚಳಿಗಾಲದಲ್ಲಿ ಶೀತ, ಕೆಮ್ಮು ಸೇರಿದಂತೆ ಹಲವು ಬಗೆಯ ಕಾಯಿಲೆ ಜನರನ್ನು ಕಾಡುತ್ತವೆ. ದೀರ್ಘಕಾಲದ ವಿಪರೀತ ಕೆಮ್ಮು ಕ್ಷಯರೋಗದ ಮುನ್ಸೂಚನೆ ಆಗಿರಬಹುದು. ರೋಗಲಕ್ಷಣ ಕಾಣಿಸಿಕೊಂಡಾಗ ತಕ್ಷಣವೇ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಬೇಕು. ಕ್ಷಯರೋಗ ಪೀಡಿತರಿಗೆ ಆರ್ಥಿಕ ನೆರವು ನೀಡುತ್ತಿದ್ದು, ಸದ್ಬಳಕೆ ಮಾಡಿಕೊಂಡಲ್ಲಿ ಅನುಕೂಲವಾಗಲಿದೆ. ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತರು ನೈರ್ಮಲ್ಯ ಮತ್ತು ಅದರ ಪ್ರಯೋಜನ ಕುರಿತು ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.

ವಕೀಲರ ಸಂಘದ ತಾಲೂಕು ಅಧ್ಯಕ್ಷ ಕೆ.ಜಿ.ಸದಾನಂದ ಮಾತನಾಡಿ, ಕ್ಷಯರೋಗ ಸೇರಿದಂತೆ ಇತರ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ಜತೆಗೆ ಮಾನವೀಯತೆ ತೋರಬೇಕಿದೆ ಎಂದರು.

ಹಿರಿಯ ವಕೀಲ ಸಿದ್ದಮಲ್ಲಪ್ಪ ಮಾತನಾಡಿ, ಎಸ್‌ಪಿ ಪಿ.ಶಶಾಂಕ್ ಮಾತನಾಡಿದರು. ಆಸ್ಪತ್ರೆ ಆಡಳಿತಾಧಿಕಾರಿ ಡಾ.ಸುರೇಶ್, ಆಶಾ ಕಾರ್ಯಕರ್ತರು, ಸಿಬ್ಬಂದಿ ಇದ್ದರು.