ದಾವಣಗೆರೆ: ಕ್ಷಯ ರೋಗದ ಬಗ್ಗೆ ಕೀಳರಿಮೆ ಬೇಡ, ತಕ್ಷಣ ವೈದ್ಯರ ಬಳಿ ಹೋಗಿ ಚಿಕಿತ್ಸೆ ಪಡೆಯಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ದೇವರಾಜ ಪಿ. ಪಟಗೆ ತಿಳಿಸಿದರು.
ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದಾವಣಗೆರೆ ತಾಲೂಕಿನಾದ್ಯಾಂತ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಕಾರ್ಯ ನಡೆಯುತ್ತಿದ್ದು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿಗಳು ತಮ್ಮ ಮನೆಗೆ ಬಂದಾಗ ಸರಿಯಾಗಿ ಮಾಹಿತಿ ನೀಡಬೇಕು.
ಹಾಗೂ ಜನರಲ್ಲಿ ರೋಗದ ಬಗ್ಗೆ ಅರಿವು ಮೂಡಿಸಬೇಕು. 2025ರ ವೇಳೆಗೆ ಕ್ಷಯಮುಕ್ತ ಭಾರತಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದರು.
ಹಿರಿಯ ಕ್ಷಯರೋಗ ಚಿಕಿತ್ಸಾ ಮೇಲ್ವಿಚಾರಕರಾದ ಎನ್.ಸಿ. ಹಾಲಸ್ವಾಮಿ ಹಾಗೂ ಎಂ.ಎಸ್. ಬಸವರಾಜ ಅವರು ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡಿದರು. ತಾಲೂಕಿನ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು ಇದ್ದರು.