ಜಿಲ್ಲೆ

ತುಡರ್ ಯುವಕ ಮಂಡಲ ವಾರ್ಷಿಕೋತ್ಸವ

ಸೌಮ್ಯ ಆರ್

ಪುತ್ತೂರು ಗ್ರಾಮಾಂತರ: ಹತ್ತುಹಲವು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಕಾವು ನನ್ಯ ತುಡರ್ ಯುವಕ ಮಂಡಲದ 14ನೇ ವರ್ಷದ ‘ತುಡರ್ ಹಬ್ಬ’ ವಾರ್ಷಿಕೋತ್ಸವ ಸಮಾರಂಭ ಕಾವು ಪಂಚಲಿಂಗೇಶ್ವರ ದೇವಳ ವಠಾರದಲ್ಲಿ ಸೋಮವಾರ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಸಭಾ ಕಾರ್ಯಕ್ರಮದೊಂದಿಗೆ ನಡೆಯಿತು.

ಕಾವು ಪಂಚಲಿಂಗೇಶ್ವರ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿವ್ಯನಾಥ ಶೆಟ್ಟಿ ಕಾವು ಅಧ್ಯಕ್ಷತೆ ವಹಿಸಿದ್ದರು. ಪ್ರಗತಿಪರ ಕೃಷಿಕ, ಹೈನುಗಾರಿಕೆಯಲ್ಲಿ ಸಾಧನೆ ಮಾಡಿರುವ ಮುಂಡೆಕೊಚ್ಚಿ ದಿವಾಕರ ಪ್ರಭು ಅವರನ್ನು ಕಾವು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಯುವಕ ಮಂಡಲ ವತಿಯಿಂದ ಗೌರವಿಸಿದರು.

ಪುತ್ತೂರು ರಾಮಕೃಷ್ಣ ಪ್ರೌಢ ಶಾಲೆ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಪುತ್ತೂರು ಒಕ್ಕಲಿಗ ಗೌಡ ಸಂಘ ಮಾಜಿ ಅಧ್ಯಕ್ಷ ನಾಗಪ್ಪ ಗೌಡ ಬೊಮ್ಮೆಟ್ಟಿ, ಉದ್ಯಮಿ ಮೋಹನ್‌ದಾಸ್ ರೈ ಕುಂಬ್ರ, ಯುವಕ ಮಂಡಲ ಸ್ಥಾಪಕಾಧ್ಯಕ್ಷ ಸುಬ್ರಾಯ ಬಲ್ಯಾಯ ಉಪಸ್ಥಿತರಿದ್ದರು.

ತುಡರ್ ಕಲಾ ಸಂಘದ ಅನಿತಾ ಕುಂಜತ್ತಾಯ ಪ್ರಾರ್ಥಿಸಿದರು. ತುಡರ್ ಯುವಕ ಮಂಡಲ ಮಾಜಿ ಅಧ್ಯಕ್ಷ ಸುನೀಲ್ ನಿಧಿಮುಂಡ ನಿರೂಪಿಸಿದರು. ಅಧ್ಯಕ್ಷ ಪುರುಷೋತ್ತಮ ಆಚಾರ್ಯ ನನ್ಯ ವಂದಿಸಿದರು. ಸಂಜೆ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಕಾವು ಶಾಖೆ ತುಡರ್ ಕಲಾ ಸಂಘದಿಂದ ‘ನೃತ್ಯಾರ್ಪಣ’ ಸಾಂಸ್ಕೃತಿಕ ಕಾರ್ಯಕ್ರಮ, ಸಭಾ ಕಾರ್ಯಕ್ರಮದ ಬಳಿಕ ಕಾಪು ರಂಗತರಂಗ ಕಲಾವಿದರಿಂದ ‘ಕುಟ್ಯಪ್ಪನ ಕುಟುಂಬ’ ತುಳು ನಾಟಕ ಪ್ರದರ್ಶನಗೊಂಡಿತು.