ಜಿಲ್ಲೆ

ಬಪ್ಪನಾಡು ದೇವಳದಲ್ಲಿ ತುಳಸಿ ಪೂಜೆ

ಸೌಮ್ಯ ಆರ್

ಮೂಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ತುಳಸಿ ಪೂಜೆ ಹಾಗೂ ಕಾರ್ತಿಕ ವಾಸದ ದೀಪೋತ್ಸವದ ಬಲಿ ನಡೆಯಿತು.

ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ಅರ್ಚಕ ಶ್ರೀಪತಿ ಉಪಾಧ್ಯಾಯರಿಂದ ಪ್ರಾತಃಕಾಲ ವಿಶೇಷ ಪ್ರಾರ್ಥನೆ, ತುಳಸಿ ಪೂಜೆ ಹಾಗೂ ಮಧ್ಯಾಹ್ನ ಅನ್ನ ಸಂತರ್ಪಣೆ, ರಾತ್ರಿ ತುಳಸಿ ಪೂಜೆ ಹಾಗೂ ಕಾರ್ತಿಕ ವಾಸದ ದೀಪೋತ್ಸವದ ಶ್ರೀ ದೇವರ ಉತ್ಸವ ಬಲಿ ನಡೆಯಿತು.

ದೇವಸ್ಥಾನದ ಅರ್ಚಕ ನರಸಿಂಹ ಭಟ್, ಆನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸ, ಸುನಿಲ್ ಆಳ್ವ, ಗೋಪಾಲಕೃಷ್ಣ ಉಪಾಧ್ಯಾಯ, ಶ್ರೀನಾಥ್ ಭಟ್, ನಾಗೇಶ್ ಬಪ್ಪನಾಡು, ಶಿವಶಂಕರ್ ಮತ್ತಿತರರು ಉಪಸ್ಥಿತರಿದ್ದರು.