ಉಡುಪಿ: ಜಿಲ್ಲೆಯಲ್ಲಿ ತುಳು ಭಾಷಾ ಅತಿಥಿ ಶಿಕ್ಷಕರಿಗೆ ಬಾಕಿ ಇರುವ ಗೌರವ ಧನ ನೀಡಲು ಕ್ರಮ ಕೈಗೊಳ್ಳಲಾಗುವುದು. 6ರಿಂದ 10ನೇ ತರಗತಿ, ಪದವಿ, ಸ್ನಾತಕೋತ್ತರ ಪದವಿ ನಡುವೆ ಪಿಯುಸಿಯಲ್ಲಿ ತುಳು ಸಹಿತ ಕೊಡವ ಪಠ್ಯದ ಕೊರತೆಯನ್ನು ಎಸ್ಇಪಿಯಲ್ಲಿ ಪರಿಗಣಿಸಲು ಅವಕಾಶವಿದೆ. ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ತುಳುವಿಗೆ ಮಾನ್ಯತೆ ನೀಡಲು ಪರಿಶೀಲಿಸಿ ತೀಮಾರ್ನಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಾತೃಭಾಷೆ ಕನ್ನಡ ಅಥವಾ ಇಂಗ್ಲೀಷ್ ಮಾಧ್ಯಮದಲ್ಲಿ ಶಿಕ್ಷಣ ನೀಡುವ ಕೆಪಿಎಸ್ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇದೆ. ರಾಜ್ಯದಲ್ಲಿ 6,000ಕ್ಕು ಅಧಿಕ ಗ್ರಾ.ಪಂ. ಗಳಿದ್ದು ತಲಾ 2ರಿಂದ 3ಗ್ರಾ.ಪಂ. ಗೊಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಮಾದರಿ ಶಾಲೆಗಳನ್ನು ಆರಂಭಿಸಲಾಗುವುದು. ಇದರ ಅಭಿವೃದ್ಧಿಗೆ ಸಿಎಸ್?ಆರ್ ನಿಧಿಯನ್ನು ಬಳಸಿಕೊಳ್ಳಲಾಗುವುದು ಎಂದರು.
ಅಧ್ಯಕ್ಷರ ನೇಮಕಕ್ಕೆ ಅಡಿ
ಪ್ರಧಾನಿ ಮೋದಿ ರಾಜ್ಯದ ಬಿಜೆಪಿ ನಾಯಕರನ್ನು ಫುಟ್?ಪಾತ್ನಲ್ಲಿ ನಿಲ್ಲಿಸಿದ್ದಾರೆ. ಪ್ರತಿಪಕ್ಷ ನಾಯಕನ ಆಯ್ಕೆ ವಿಳಂಬವಾಗುತ್ತಿರುವುದರಿಂದ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರ ನೇಮಕಕ್ಕೆ ಅಡ್ಡಿಯಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬೈಂದೂರಿನ ಮಾಜಿ ಶಾಸಕ ಗೋಪಾಲ ಪೂಜಾರಿ, ಅಶೋಕ್ ಕುಮಾರ್ ಕೊಡವೂರು, ದಿನೇಶ್ ಹೆಗ್ಡೆ ಮೊಳಹಳ್ಳಿ, ಕೃಷ್ಣಮೂರ್ತಿ ಆಚಾರ್ಯ, ಕಿಶನ್ ಹೆಗ್ಡೆ ಕೊಳ್ಕೆಬೈಲು, ಪ್ರಸಾದ್ರಾಜ್ ಕಾಂಚನ್, ಮುನಿಯಾಲು ಉದಯ ಶೆಟ್ಟಿ, ಅಣ್ಣಯ್ಯ ಶೇರಿಗಾರ್ ಉಪಸ್ಥಿತರಿದ್ದರು.