ಮಂಗಳೂರು : ತುಳು ಭಾಷೆಯಲ್ಲಿ ಬರೆಯುವ ಹೆಚ್ಚಿನ ಲೇಖಕರು ಭಾಷೆಯ ಬಗ್ಗೆ ಗಂಭೀರವಾಗಿ ಯೋಚಿಸುವುದಿಲ್ಲ. ಆದರೆ ಭಾಸ್ಕರ ರೈ ಕುಕ್ಕುವಳ್ಳಿಯವರ ಸೀಯನ ಕೃತಿಯಲ್ಲಿ ವಸ್ತು ವೈವಿಧ್ಯತೆಯೊಂದಿಗೆ ಭಾಷೆಯನ್ನು ಸಶಕ್ತವಾಗಿ ಬಳಸಲಾಗಿದೆ. ನೂರಕ್ಕೂ ಹೆಚ್ಚಿನ ಅವರ ಕವಿತೆಗಳಲ್ಲಿ ತುಳು ಬದುಕಿನ ನೈಜ ಚಿತ್ರಣವನ್ನು ವಿವಿಧ ಆಯಾಮಗಳಲ್ಲಿ ಕಟ್ಟಿ ಕೊಡಲಾಗಿದೆ’ ಎಂದು ಹಿರಿಯ ಜಾನಪದ ಸಂಶೋಧಕ ಪ್ರೊ.ಎ.ವಿ.ನಾವಡ ಹೇಳಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಯಕ್ಷಾಂಗಣ ಮಂಗಳೂರು ಸಹಯೋಗದಲ್ಲಿ ಕದ್ರಿ ಮಂಜುನಾಥ ದೇವಾಲಯದಜರಗಿದ ಭಾಸ್ಕರ ರೈ ಕುಕ್ಕುವಳ್ಳಿ ಅವರ ನೂತನ ಕೃತಿ ’ಸೀಯನ’ ಕವನ ಸಂಕಲನ ಬಿಡುಗಡೆಗೊಳಿಸಿ ಮಾತನಾಡಿದರು.
ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಎ.ಸಿ. ಭಂಡಾರಿ ಕಾರ್ಯಕ್ರಮ ಉದ್ಘಾಟಿಸಿದರು. ರವೀಂದ್ರ ರೈ ಕಲ್ಲಿಮಾರು ಕೃತಿ ಪರಿಚಯ ನೀಡಿದರು. ಎ.ಕೆ.ಜಯರಾಮ ಶೇಖ, ರಾಜಾರಾಮ ಶೆಟ್ಟಿ ಮನವಳಿಕೆ, ಲಕ್ಷ್ಮೀ ನಾರಾಯಣ ರೈ ಹರೇಕಳ, ವಾಸಪ್ಪ ಶೆಟ್ಟಿ ಬೆಳ್ಳಾರೆ, ನಿವೇದಿತಾ ಎನ್ ಶೆಟ್ಟಿ, ಸುಮಾ ಪ್ರಸಾದ್ ಉಪಸ್ಥಿತರಿದ್ದರು.
ತೋನ್ಸೆ ಪುಷ್ಕಳ ಕುಮಾರ್ ಮತ್ತು ತಂಡದವರು ಕವನ ಸಂಕಲನದ ಹಾಡುಗಳನ್ನು ಸ್ವರ ಸಂಯೋಜಿಸಿ ಹಾಡಿದರು.