ಜಿಲ್ಲೆ

ಮಕ್ಕಳು ತುಳು ಸಂಸ್ಕೃತಿ ಅರಿವು ಅಗತ್ಯ

ಗೋಪಾಲಕೃಷ್ಣ ಪಾದೂರ್

ಉಡುಪಿ: ಮಕ್ಕಳಿಗೆ ಎಳವೆಯಲ್ಲೇ ತುಳು ಸಂಸ್ಕೃತಿ ಬಗ್ಗೆ ಅರಿವು ಮೂಡಿಸಬೇಕು. ಇದರಿಂದ ಭಾಷೆ ಉಳಿಯಲು ಸಾಧ್ಯ ಎಂದು ಕನ್ನಡ ಮತ್ತು  ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಹೇಳಿದ್ದಾರೆ.

ತುಳುಕೂಟದ ವತಿಯಿಂದ ಕನ್ನಡ ಮತ್ತು ಸಂಸತಿ ಇಲಾಖೆ ಸಹಕಾರದಲ್ಲಿ 30 ನೇ ವರ್ಷದ ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ ಸಮಾರಂಭದಲ್ಲಿ ಅವರು ಮಾತನಾಡಿದರು.

ಎಸ್​ಎಸ್​ಎಲ್​ಸಿಯಲ್ಲಿ ತುಳು ಅಧ್ಯಯನಕ್ಕೆ ಅವಕಾಶ ಮಾಡಿಕೊಡುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಮಕ್ಕಳು ತುಳು ಭಾಷೆ ಪರೀೆಗಷ್ಟೇ ಸೀಮಿತಗೊಳಿಸದೇ ಮುಂದಿನ ಜೀವನದಲ್ಲಿಯೂ ತುಳು ಸೊಗಡನ್ನು ಅಳವಡಿಸಕೊಳ್ಳಬೇಕು ಎಂದರು.

ಉಡುಪಿ ತುಳುಕೂಟದ ಅಧ್ಯ ಬಿ. ಜಯಕರ ಶೆಟ್ಟಿ ಇಂದ್ರಾಳಿ ಅಧ್ಯತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭದ್ರಾವತಿ ತುಳುಕೂಟದ ಅಧ್ಯ ಸುಧಾಕರ ಶೆಟ್ಟಿ, ಉದ್ಯಮಿ ಪ್ರಭಾಕರ್​ ಪೂಜಾರಿ, ಸಮಾಜ ಸೇವಕ ಯು. ವಿಶ್ವನಾಥ ಶೆಣೈ, ತುಳುಕೂಟದ ಕಾರ್ಯದರ್ಶಿ ಗಂಗಾಧರ ಕಿದಿಯೂರು, ಕೋಶಾಧಿಕಾರಿ ಚೈತನ್ಯ ಎಂ. ಜಿ. ಉಪಸ್ಥಿತರಿದ್ದರು. ಸಾಹಿತಿ ಸುಲೋಚನಾ ಜನಾರ್ದನ್​ ಪಚ್ಚಿನಡ್ಕ ಅವರು ಪ್ರಶಸ್ತಿ ಪುರಸತ ಕಾದಂಬರಿಯನ್ನು ಪರಿಚಯಿಸಿದರು.

ಈ ಸಂದರ್ಭದಲ್ಲಿ ಎಸ್​ಎಸ್​ಎಲ್​ಸಿಯ ತುಳುಪಠ್ಯದಲ್ಲಿ ಶೇ. 100 ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ತುಳುಕೂಟದ ಉಪಾಧ್ಯ ದಿವಾಕರ ಸನಿಲ್​ ಸ್ವಾಗತಿಸಿದರು. ಪಣಿಯಾಡಿ ಕಾದಂಬರಿ ಪ್ರಶಸ್ತಿ ಸಂಚಾಲಕಿ ಶಿಲ್ಪಾ ಜೋಶಿ ಪ್ರಾಸ್ತವಿಕವಾಗಿ ಮಾತನಾಡಿದರು. ತಾರಾ ಉಮೇಶ್​ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.