ಜಿಲ್ಲೆ

ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರಿಯಾಯಿತಿ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು:ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ 2025ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್​ಸಿಂಗ್​ ಕೋರಿದ್ದಾರೆ.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆ ದೂ.080- 22107705 ಹಾಗೂ ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ.

ಅಲ್ಲದೆ, ಕನ್ನಡ ಪುಸ್ತಕ ಪ್ರಾಧಿಕಾರದ ಆನ್​ಲೈನ್​ www.kannadapustakapradhikara.com ನಲ್ಲಿಯೂ ಕೂಡ ಶೇ.50ರಷ್ಟು ರಿಯಾಯಿತಿ ಲಭ್ಯವಿದೆ.

ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕಿಯ, ಪ್ರಾಚಿನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ.