ಜಿಲ್ಲೆ

6ನೇ ತರಗತಿ ಪ್ರವೇಶಕ್ಕೆ ಅರ್ಜಿ

ತುಮಕೂರು: ಜಿಲ್ಲೆಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉಚಿತ ಗುಣಮಟ್ಟದ ವಸತಿಯುತ ಶಿಕ್ಷಣ ನೀಡುವ ಉದ್ದೇಶದಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಜಿಲ್ಲೆಯಲ್ಲಿ ನಡೆಯುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್​.ಅಂಬೇಡ್ಕರ್​, ಶ್ರೀಮತಿ ಇಂದಿರಾಗಾಂಧಿ, ಅಟಲ್​ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸುಸಜ್ಜಿತವಾದ ಕಟ್ಟಡ ವ್ಯವಸ್ಥೆಯೊಂದಿಗೆ ನುರಿತ ಶಿಕ್ಷಕರಿಂದ ಶಿಕ್ಷಣ ಸೌಲಭ್ಯ ನೀಡಲಾಗುವುದು. ಪ್ರಸ್ತುತ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಈ ಅವಕಾಶ ಕಲ್ಪಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ವಿದ್ಯಾರ್ಥಿಯ ನಂಬರ್​, ವಿದ್ಯಾರ್ಥಿಯ ಆಧಾರ್​ ಕಾರ್ಡ್​, ಶಾಲಾ ದೃಢೀಕರಣ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಿದ್ಯಾರ್ಥಿಯ ಇತ್ತೀಚಿನ 2 ಭಾವಚಿತ್ರ, ವಿಶೇಷ ವರ್ಗವಿದ್ದಲ್ಲಿ ಸಂಬಂಧಪಟ್ಟ ಪ್ರಮಾಣ ಪತ್ರ ಲಗತ್ತಿಸಿ ಜನವರಿ 25ರೊಳಗಾಗಿ ಹತ್ತಿರದ ವಸತಿ ಶಾಲೆಗಳಿಗೆ ಸಲ್ಲಿಸಬಹುದು.

ಪ್ರವೇಶಾತಿಗೆ ಫೆಬ್ರವರಿ 15ರಂದು ಪರೀಕ್ಷೆ ನಡೆಯಲಿದೆ, ಸಫಾಯಿ ಕರ್ಮಚಾರಿ, ಪೌರಕಾರ್ಮಿಕರ ಮಕ್ಕಳಿಗೆ ಪರೀಕ್ಷೆ ಇಲ್ಲದೆ ನೇರ ದಾಖಲಾತಿ ಮಾಡಿಕೊಳ್ಳಲಾಗುತ್ತಿದೆ.