ತುಮಕೂರು: ನಗರ ಪ್ರದೇಶ ವ್ಯಾಪ್ತಿಯಲ್ಲಿ ಮನೆ, ನಿವೇಶನಗಳಿಗೆ ಎ-&ಖಾತೆ ಮತ್ತು ಬಿ-&ಖಾತೆ ಮಾಡಿಕೊಡುವ ಅವಧಿಯನ್ನು ಮತ್ತೆ 3 ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ ಎಂದು ಪೌರಾಡಳಿತ ಸಚಿವ ರಹೀಮ್ಖಾನ್ ಹೇಳಿದರು.
ನಗರದಲ್ಲಿ ಇಂದು ಸುದ್ದಿಗಾರರ ಜತೆ ಮಾತನಾಡಿದ ಅವರು, ಬಡವರ ಮನೆ, ನಿವೇಶನಗಳಿಗೆ ದಾಖಲಾತಿ ಮಾಡಿಕೊಡುವ ಸಲುವಾಗಿ ಬಿ&ಖಾತೆ ಜಾರಿಗೆ ತರಲಾಗಿದ್ದು, ಈಗಾಗಲೇ 3 ತಿಂಗಳ ಅವಧಿ ಮುಕ್ತಾಯಗೊಂಡಿದೆ. ರಾಜ್ಯದಲ್ಲಿ ಶೇ.50ರಷ್ಟು ಮಾತ್ರ ಖಾತೆಗಳಾಗಿರುವ ಹಿನ್ನೆಲೆಯಲ್ಲಿ ಉಳಿದವರಿಗೂ ಅನುಕೂಲ ಕಲ್ಪಿಸುವ ಸಲುವಾಗಿ ಅವಧಿಯನ್ನು ಮತ್ತೆ 3 ತಿಂಗಳ ಕಾಲ ರಾಜ್ಯ ಸರ್ಕಾರ ವಿಸ್ತರಿಸಿದೆ ಎಂದರು.
ತುಮಕೂರು ಜಿಲ್ಲೆಯ ನಗರ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 10000 ಎ &ಖಾತೆ ಮತ್ತು 5800 ಬಿ&ಖಾತೆ ಅರ್ಜಿಗಳು ಸಲ್ಲಿಕೆಯಾಗಿವೆ ಎಂದರು. ನಗರೋತ್ಥಾನ ಯೋಜನೆಯಡಿ ಜಿಲ್ಲೆಗೆ 102 ಕೋಟಿ ರೂ. ಬಿಡುಗಡೆಯಾಗಿದ್ದು, ಈ ಪೈಕಿ 40 ಕೋಟಿ ರೂ. ಮಾತ್ರ ರ್ಖಚಾಗಿದೆ ಎಂದರು.