ತುಮಕೂರು: ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅವರನ್ನು ಬೆಂಗಳೂರಿನ ನೃಪತುಂಗ ವಿವಿ ಕುಲಸಚಿವ ಹುದ್ದೆಗೆ ವರ್ಗಾಹಿಸಿ ಸರ್ಕಾರ ಬುಧವಾರ ಆದೇಶಿಸಿದೆ.
ತುಮಕೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹುದ್ದೆಗೆ ಆಯ್ಕೆ ಶ್ರೇಣಿ ಕೆಎಎಸ್ ಅಧಿಕಾರಿ ಎನ್.ತಿಪ್ಪೇಸ್ವಾಮಿ ಅವರನ್ನು ನೇಮಿಸಲಾಗಿದೆ. ಖಮಖಂಡಿಯ ಕೃಷ್ಣ ಮೇಲ್ದಂಡೆ ಯೋಜನೆಯ ಹುದ್ದೆಯ ವರ್ಗಾವಣೆಯಾಗಿದ್ದ ತಿಪ್ಪೇಸ್ವಾಮಿ ಅವರನ್ನು ತುಮಕೂರಿಗೆ ವರ್ಗಾಹಿಸಲಾಗಿದೆ.
ಎತ್ತಿನಹೊಳೆ ಯೋಜನೆ ತುಮಕೂರು ವಿಶೇಷ ಭೂಸ್ವಾಧೀನಾಧಿಕಾರಿ ಹುದ್ದೆಗೆ ಜಿ.ಎನ್.ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದೆ.