ಜಿಲ್ಲೆ

ಅರ್ಜಿ ಆಹ್ವಾನ

ತುಮಕೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದ ಮೆಟ್ರಿಕ್​ ನಂತರದ ವಿದ್ಯಾರ್ಥಿ ನಿಲಯ(ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ)ಗಳ ಪ್ರವೇಶಾತಿಗೆ ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಜಾಲತಾಣ https://shp.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಪ್ರವೇಶಾತಿಯಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ ಶೇ.75ರಷ್ಟು ಹಾಗೂ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ, ಇತರೆ ಹಿಂದುಳಿದ ವರ್ಗಕ್ಕೆ ಶೇ.25ರಷ್ಟು ಸ್ಥಾನ ಮೀಸಲಿಡಲಾಗಿದೆ.

ಮಾಹಿತಿಗೆ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್​ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು-. ದೂ.0816- 2273724 ಸಂಪರ್ಕಿಸಿ.