ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ, ವೃತ್ತಿಪರ ಸ್ನಾತಕೋತ್ತರ ಪದವಿ ಮತ್ತು ನರ್ಸಿಂಗ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ನೀಡುವ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 31ರವರೆಗೆ ವಿಸ್ತರಿಸಿದೆ.
ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಮಾ.31ರೊಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಸಹಾಯವಾಣಿ 8050770005, ದೂ.1902 ಸಂಪರ್ಕಿಸಿ.