ಜಿಲ್ಲೆ

ಅತಿಥಿ ಶಿಕ್ಷಕ ಹುದ್ದೆಗಳಿಗೆ ಅರ್ಜಿ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು ಮತ್ತು ಮೌಲಾನಾ ಆಜಾದ್​ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಅತಿಥಿ ಉಪನ್ಯಾಸಕರ ಹುದ್ದೆ ಹಾಗೂ ಡಾ.ಎಪಿಜೆ ಅಬ್ದುಲ್​ ಕಲಾಂ ವಸತಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮೌಲಾನಾ ಆಜಾದ್​ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿಯನ್ನು ಮೇ.19ರೊಳಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಕಚೇರಿ, ಮೌಲಾನಾ ಆಜಾದ್​ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು.-572102 ಇವರಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ದೂ.0816 -2273724 ಸಂಪರ್ಕಿಸಿ.