ಜಿಲ್ಲೆ

ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ

ತುಮಕೂರು: ತುಮಕೂರು ತಾಲೂಕಿನ ಪರಿಶಿಷ್ಟ ಪಂಗಡ ಜನಾಂಗದವರ ಏಳಿಗೆಗಾಗಿ ಶ್ರಮಿಸಿದ ಹಾಗೂ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಮತ್ತು ಇತರೆ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಅಕ್ಟೋಬರ್​ 7ರಂದು ರಾಜ್ಯ ಮಟ್ಟದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಸಾಧಕರು ಸಹಾಯಕ ನಿರ್ದೇಶಕ, ಸಮಾಜ ಕಲ್ಯಾಣ ಇಲಾಖೆ, ತಾಲೂಕು ಕಚೇರಿ, ಜಿಪಂ ಕಚೇರಿ ಪಕ್ಕ, ಬಿ.ಹೆಚ್​.ರಸ್ತೆ, ತುಮಕೂರು ಇವರಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್​ 10ರೊಳಗಾಗಿ ಸಲ್ಲಿಸಬಹುದು.