ಜಿಲ್ಲೆ

ವಿವಿಧ ತರಬೇತಿಗೆ ಅರ್ಜಿ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ರುಡ್​ಸೆಟ್​ ಸಂಸ್ಥೆ ವತಿಯಿಂದ ಏ.16 ರಿಂದ ಹಮ್ಮಿಕೊಂಡಿರುವ ಹಸು ಸಾಕಾಣಿಕೆ(ಹೈನುಗಾರಿಕೆ) ಮತ್ತು ಎರೆಹುಳುಗೊಬ್ಬರ ಕುರಿತ 10 ದಿನಗಳ ಉಚಿತ ತರಬೇತಿಗೆ ಗ್ರಾಮೀಣ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಫಿ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್​ ಕಾರ್ಡ್​, ಬಿಪಿಎಲ್​ ಕಾರ್ಡ್​ ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿ ಕಡ್ಡಾಯವಾಗಿ ವಸತಿಯುತವಾಗಿದ್ದು, ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಏಪ್ರಿಲ್​ 4 ಕಡೆಯ ದಿನವಾಗಿದೆ.

ಮಾಹಿತಿಗಾಗಿ ರುಡ್​ಸೆಟ್​ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊ.9380162042, 9241482541, 9740982585, 9113880324 ಸಂಪರ್ಕಿಸಿ.