ಜಿಲ್ಲೆ

ವಿದ್ಯಾಸಿರಿ ಸೌಲಭ್ಯಕ್ಕೆ ಅರ್ಜಿ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್​ ನಂತರದ ಪಿಯು ಮತ್ತು ಸಮಾನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸ್​ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ(ಊಟ ಮತ್ತು ವಸತಿ ಸಹಾಯ ಯೋಜನೆ), ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ ಸೌಲಭ್ಯ ನೀಡಲು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಅ.31ರ ವರೆಗೆ ವಿಸ್ತರಿಸಲಾಗಿದೆ.


ಆಸಕ್ತ ವಿದ್ಯಾರ್ಥಿಗಳು ಜಾಲತಾಣ https://ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.
ಸಹಾಯವಾಣಿ 8050770005, ದೂ.902 ಸಂಪರ್ಕಿಸಿ.