ತುಮಕೂರು: ಪರಿಶಿಷ್ಟ ಜಾತಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯಲು ಸದರಿ ಅವಧಿಯಲ್ಲಿ ಶಿಷ್ಯವೇತನಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಆಯ್ಕೆಯಾಗಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಇಚ್ಛಿಸುವ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳು ಇಲಾಖಾ ಜಾಲತಾಣ www.sw.kar.nic.inನಲ್ಲಿ ಅರ್ಜಿಯನ್ನು ಆನ್‌ಲೈನ್ ಮೂಲಕ ಜುಲೈ 31 ರ ವರೆಗೆ ಸಲ್ಲಿಸಬಹುದು.
ಮಾಹಿತಿಗೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿದೇರ್ಶಕ, ತಾಲೂಕು ಸಹಾಯಕ ನಿದೇರ್ಶಕರನ್ನು ಸಂಪರ್ಕಿಸಬಹುದು.